ADVERTISEMENT

ಆರ್‌ಟಿಇ ಪರಿಣಾಮಕಾರಿ ಜಾರಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 9 ಜನವರಿ 2014, 5:34 IST
Last Updated 9 ಜನವರಿ 2014, 5:34 IST

ಬೀದರ್‌: ಬಡ, ಅರ್ಹ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಒತ್ತು ನೀಡುವ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಅಧಿಕಾರಿಗಳು ಒತ್ತು ನೀಡಬೇಕು ಎಂದು ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.

2012–13ನೇ ಸಾಲಿನಲ್ಲಿ ಖಾಸಗಿ ಶಾಲೆಗಳ ತಕರಾರು ಮತ್ತು ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯ­ದಿಂದಾಗಿ ಕಾಯ್ದೆ ಪರಿಣಾಮ­ಕಾರಿ­ಯಾಗಿ ಜಾರಿಗೆ ಬರಲಿಲ್ಲ. ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಮುಂದಾಗಬೇಕು.

ಈ ಬಾರಿ ಅಂಥ ಲೋಪ ಆಗದಂತೆ ಎಚ್ಚರವಹಿಸಬೇಕು. ಕಾಯ್ದೆಯ ಅನುಕೂಲಗಳ ಬಗೆಗೆ ವ್ಯಾಪಕ ಪ್ರಚಾರ ನಡೆಸಿ ಜಾಗೃತಿ ಮೂಡಿಸಬೇಕು ಎಂದು ಸಮಿತಿಯ ಜಿಲ್ಲಾ ಘಟಕದ ಸಂಚಾಲಕ ರಾಜಕುಮಾರ ಮೂಲಭಾರತಿ, ಶಿವಕುಮಾರ ನೀಲಿಕಟ್ಟಿ ಮತ್ತಿತರರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.