ADVERTISEMENT

ಉದ್ದು, ಹೆಸರು ಖರೀದಿ ಕೇಂದ್ರಕ್ಕೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2017, 6:06 IST
Last Updated 26 ಅಕ್ಟೋಬರ್ 2017, 6:06 IST

ಔರಾದ್:  ತಾಲ್ಲೂಕಿನ ಎಲ್ಲ ಹೋಬಳಿ ಕೇಂದ್ರಗಳಲ್ಲಿ ಉದ್ದು, ಹೆಸರು ಹಾಗೂ ಸೋಯಾ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ಆಗ್ರಹಿಸಿ ರೈತರು ಬುಧವಾರ ವಡಗಾಂವ್ ಗ್ರಾಮ ಪಂಚಾಯತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ರಾಜ್ಯ ರೈತ ಸಂಘದ ಅಧ್ಯಕ್ಷ ಶ್ರೀಮಂತ ಬಿರಾದಾರ, ಪ್ರಕಾಶ ಬಾವಗೆ, ಝರಣಪ್ಪ ದೇಶಮುಖ, ರಾಜಕುಮಾರ ಪಾಟೀಲ ನೇತೃತ್ವದಲ್ಲಿ ಪ್ರತಿಟಿಸಿದರು.‘ಜಿಲ್ಲೆಯ ಎಲ್ಲ ಹೋಬಳಿ ಕೇಂದ್ರದಲ್ಲಿ ಉದ್ದು, ಹೆಸರು ಖರೀದಿ ಕೇಂದ್ರ ಸ್ಥಾಪಿಸಲಾಗಿದೆ. ಆದರೆ ಔರಾದ ತಾಲ್ಲೂಕಿನ ಎರಡು ಕಡೆ ಮಾತ್ರ ಈ ಸೌಲಭ್ಯ ನೀಡಲಾಗಿದೆ. ಉಳಿದ ಔರಾದ್, ಸಂತಪುರ, ವಡಗಾಂವ, ಚಿಂತಾಕಿ, ಎಕಂಬಾ ಹೋಬಳಿ ಕೇಂದ್ರದಲ್ಲಿ ಈಗಲೂ ಖರೀದಿ ಕೇಂದ್ರ ಆರಂಭವಾಗಿಲ್ಲ’ ಎಂದು ರೈತರು ದೂರಿದರು.

‘ಸರ್ಕಾರ ತಾಲ್ಲೂಕಿನ ರೈತರ ಬಗ್ಗೆ ತಾರತಮ್ಯ ಧೋರಣೆ ಅನುಸರಿಸದೇ ಎಲ್ಲ ಹೋಬಳಿ ಕೇಂದ್ರದಲ್ಲಿ ಉದ್ದು, ಹೆಸರು ಖರೀದಿ ಕೇಂದ್ರ ಆರಂಭಿಸಬೇಕು. ಕೂಡಲೇ ಸೋಯಾಗೆ ಬೆಂಬಲ ಬೆಲೆ ಘೋಷಿಸಬೇಕು’ ಎಂದು ಅಗ್ರಹಿಸಿದರು. ಸ್ಥಳಕ್ಕೆ ಬಂದ ಉಪತಹಶೀಲ್ದಾರ ರಮೇಶ ಪಾಂಚಾಳ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.