ADVERTISEMENT

ಉದ್ಯೋಗಿನಿ ಸಾಲ ಸೌಲಭ್ಯ: ಮಹಿಳೆಯರಿಂದ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 9 ಜೂನ್ 2015, 7:12 IST
Last Updated 9 ಜೂನ್ 2015, 7:12 IST

ಬೀದರ್: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಉದ್ಯೋಗಿನಿ ಸಾಲ ಯೋಜನೆಯಡಿ 2015–-16ನೇ ಸಾಲಿಗೆ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಉದ್ಯೋಗಿನಿ ಯೋಜನೆಯಡಿ ಗರಿಷ್ಠ ₨1 ಲಕ್ಷ ಸಾಲ ಸೌಲಭ್ಯವಿದ್ದು, 18 ರಿಂದ 45 ವರ್ಷದ ಮಹಿಳೆಯರು ಸಾಲ ಸೌಲಭ್ಯವನ್ನು ಪಡೆಯಲು ಅರ್ಹರು.

ಅಗತ್ಯ ದಾಖಲೆಗಳೊಂದಿಗೆ ಜೂನ್ 20ರ ಒಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.