ADVERTISEMENT

ಖಾತರಿ ಯೋಜನೆ ಅಕ್ರಮ ತನಿಖೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2012, 5:10 IST
Last Updated 17 ಆಗಸ್ಟ್ 2012, 5:10 IST

ಬೀದರ್: ಭಾಲ್ಕಿ ತಾಲ್ಲೂಕಿನ ಜ್ಯಾಂತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಆಗಿರುವ ಅವ್ಯವಹಾರದ ತನಿಖೆ ನಡೆಸಲು ಆಗ್ರಹಪಡಿಸಿ ಮತ್ತು  ಕೆಲಸ ಮಾಡಿದವರಿಗೆ ಮೊತ್ತ ಪಾವತಿಸಲು ಆಗ್ರಹಿಸಿ ಅಲ್ಲಿನ ಗ್ರಾಮಸ್ಥರು ಗುರುವಾರ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಗ್ರಾಮ ಪಂಚಾಯಿತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಕಂಪ್ಯೂಟರ್ ಅಧಿಕಾರಿ ಗೈರು ಹಾಜರಿ ಹೆಚ್ಚಿದೆ. ಈ ಬಗೆಗ ತನಿಖೆ ನಡೆಸಬೇಕು ಎಂದು ಈ ಕುರಿತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಅವರಿಗೆ ಸಲ್ಲಿಸಿರುವ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಉದ್ಯೋಗ ಖಾತರಿ ಯೋಜನೆಯಡಿ ರೇಷ್ಮೆ ಸಸಿಗಳ ವಿತರಣೆ, ರಸ್ತೆ ನಿರ್ಮಾಣ, ಬಾವಿನಿರ್ಮಾಣ ಕಾಮಗಾರಿ ನಡೆದಿದ್ದು, ಇಲ್ಲಿ ಕಾರ್ಯ ನಿರ್ವಹಿಸಿರುವ ಜನರಿಗೆ ಹಣ ಪಾವತಿಯಾಗಿಲ್ಲ. ಅಲ್ಲದೆ, ಒಂದೇ ವ್ಯಕ್ತಿಯ ಹೆಸರಿನಲ್ಲಿ ಹೆಚ್ಚಿನ ಮೊತ್ತ ಪಡೆಯಲಾಗಿದೆ ಎಂದು ಮನವಿಯಲ್ಲಿ ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.