ADVERTISEMENT

ಗಾದಗಿ: ಪರಿಸರ ಜಾಗೃತಿ ಆಂದೋಲನ

​ಪ್ರಜಾವಾಣಿ ವಾರ್ತೆ
Published 10 ಜುಲೈ 2012, 6:50 IST
Last Updated 10 ಜುಲೈ 2012, 6:50 IST

ಬೀದರ್: ಉತ್ತಮ ಆರೋಗ್ಯಕ್ಕೆ ಶುದ್ಧ ವಾತಾವರಣ ಅಗತ್ಯ. ಪ್ರತಿಯೊಬ್ಬರು ಹೆಚ್ಚಿನ ಗಿಡ ಮರಗಳು ಬೆಳೆಸಲು ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ನ ಜಂಟಿ ಕಾರ್ಯದರ್ಶಿ ಪಡಿಂತ ಕೆ. ಬಾಳೂರೆ ತಿಳಿಸಿದರು. ಗಾದಗಿ ಗ್ರಾಮದಲ್ಲಿ ಈಚೆಗೆ ರಾಷ್ಟ್ರೀಯ ಪರಿಸರ ಜಾಗೃತಿ ಆಂದೋಲನದಲ್ಲಿ ಮಾತನಾಡಿದರು.

ಅರಣ್ಯ ಸಂರಕ್ಷಣಾಧಿಕಾರಿ ಎಸ್. ವೆಂಕಟೇಶ ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಸೂರ್ಯಕಾಂತ ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು. ಅರಣ್ಯಾಧಿಕಾರಿ ಪ್ರೇಮಶೇಖರ, ಮುಖ್ಯಗುರು ರುಕ್ಮಿಣಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಶಿವರಾಜ ಬಸಪ್ಪ ಮತ್ತಿತರರು ಇದ್ದರು.

ಜಾನ್ ವೇಸ್ಲಿ ಸ್ವಾಗತಿಸಿದರು. ಗೋಪಾಲ ವಂದಿಸಿದರು. ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಹಾಗೂ ಶುಭಾಂಗಿನಿ ಶಿಕ್ಷಣ ಮತ್ತು ಚಾರಿಟೇಬಲ್ ಟ್ರಸ್ಟ್‌ಗಳ ಸಹಯೋಗದಲ್ಲಿ ಕಾರ್ಯಕ್ರಮದ ಆಯೋಜಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.