ADVERTISEMENT

ಜಾನಪದ ಕಲೆ ಬೆಳವಣಿಗೆಗೆ ಸಹಕರಿಸಿ: ಜನವಾಡಕರ್‌

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2013, 10:34 IST
Last Updated 16 ಸೆಪ್ಟೆಂಬರ್ 2013, 10:34 IST

ಬೀದರ್‌: ಜಾನಪದ ಕಲೆ ಬೆಳವಣಿಗೆಗಾಗಿ ಎಲ್ಲರೂ ಸಹಕರಿಸುವ ಮೂಲಕ ಆ ಕಲೆಯನ್ನು ಉಳಿಸಿ, ಬೆಳೆಸಬೇಕು ಎಂದು ಸಾಹಿತಿ ಎಸ್‌.ಎಂ. ಜನವಾಡಕರ್‌ ತಿಳಿಸಿದರು.

ಸಂಗೊಳ್ಳಿ ರಾಯಣ್ಣ ಅವರ ಜಯಂತಿ ನಿಮಿತ್ತ ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘ ನಗರದ ರಾಂಪುರೆ ಕಾಲೊನಿಯಲ್ಲಿ ಇರುವ ಯೋಗೀಶ ಚಿತ್ರಕಲಾ ಮಹಾವಿದ್ಯಾಲಯದಲ್ಲಿ ಭಾನುವಾರ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಜಾನಪದ ಸಾಹಿತ್ಯ’ ವಿಷಯ ಕುರಿತು ಅವರು ಮಾತನಾಡಿದರು.

​ಎಸ್‌.ಸಿ/ಎಸ್‌.ಟಿ. ನೌಕರರ ಸಮನ್ವಯ ಸಮಿತಿಯ ಜಿಲ್ಲಾ ಅಧ್ಯಕ್ಷ ಎಂ.ಎಸ್‌. ಮನೋಹರ್ ಮಾತನಾಡಿದರು. ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಕಾಂತ್‌ ಬಿರಾದಾರ್‌, ಮಹಾವಿದ್ಯಾಲಯದ ಕಾರ್ಯದರ್ಶಿ ಯೋಗೀಶ ಚ. ಮಠದ, ಜಿಲ್ಲಾ ದಾಸ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಆತ್ಮಾನಂದ ಬಂಬಳಗಿ, ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್‌ಕುಮಾರ್ ಜೋಳದಾಪಕೆ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.