ADVERTISEMENT

ನೇರ ನೇಮಕ ಕೈಬಿಡಲು ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2012, 8:10 IST
Last Updated 20 ಏಪ್ರಿಲ್ 2012, 8:10 IST

ಬೀದರ್: ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಸಿ ಮತ್ತು ಡಿ ದರ್ಜೆಯ ಹುದ್ದೆಗಳನ್ನು ನೇರ ನೇಮಕ ಮಾಡಿಕೊಳ್ಳದಿರುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆರೋಗ್ಯ ಇಲಾಖೆ ಸಿ ಮತ್ತು ಡಿ ಗ್ರೂಪ್ ಗುತ್ತಿಗೆ ನೌಕರರ ಸಂಘವು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿತು.

ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ರ‌್ಯಾಲಿ ನಡೆಸಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಲಾಯಿತು.ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 2,323 ಸಿ ಮತ್ತು ಡಿ ದರ್ಜೆ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ.

ಆದರೆ, ಇಲಾಖೆಯಲ್ಲಿ ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಹೊರ ಗುತ್ತಿಗೆ ನೌಕರರನ್ನು ಪರಿಗಣಿಸದೇ ಇರುವುದು ಸರಿಯಲ್ಲ ಎಂದು ಹೇಳಿದ್ದಾರೆ.ಈಗಾಗಲೇ ಹೊರ ಗುತ್ತಿಗೆ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವವರನ್ನು ಕಾಯಂಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಸಂಘದ ರಾಜ್ಯ ಅಧ್ಯಕ್ಷ ಎನ್.ಎಸ್. ವೀರೇಶ, ಪ್ರಮುಖರಾದ ಬಾಲಾಜಿ, ಶರಣಯ್ಯ ಸ್ವಾಮಿ, ಅಪ್ಪಾರಾವ್, ಸುರೇಶ, ಶ್ರೀಮಂತ, ಸಂಜೀವಕುಮಾರ, ರಾಜಕುಮಾರ ಪಾಲ್ಗೊಂಡಿದ್ದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.