ADVERTISEMENT

ಬಸ್‌ಪಾಸ್ ದರ ರಿಯಾಯಿತಿ: ವಿಜಯೋತ್ಸವ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2012, 8:00 IST
Last Updated 14 ಆಗಸ್ಟ್ 2012, 8:00 IST

ಬೀದರ್: ವಿದ್ಯಾರ್ಥಿಗಳ ವಾರ್ಷಿಕ ಬಸ್‌ಪಾಸ್ ದರದಲ್ಲಿ ಶೇ 20 ರಷ್ಟು ರಿಯಾಯಿತಿ ಕಲ್ಪಿಸುವುದಾಗಿ ರಾಜ್ಯ ಸರ್ಕಾರ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದಲ್ಲಿ ಸೋಮವಾರ ವಿಜಯೋತ್ಸವ ಆಚರಿಸಿದರು.

ಅಂಬೇಡ್ಕರ್ ವೃತ್ತದ ಬಳಿ ಜಮಾಯಿಸಿದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಪರಿಷತ್ ಹೋರಾಟದ ಫಲವಾಗಿ ಸರ್ಕಾರ ವಿದ್ಯಾರ್ಥಿಗಳ ನೆರವಿಗೆ ಧಾವಿಸಿದೆ. ಬಸ್‌ಪಾಸ್ ರಜಾ ದಿನಗಳಿಗೂ ಅನ್ವಯಿಸಲಿರುವುದು ಸಂತಸದ ಸಂಗತಿಯಾಗಿದೆ ಎಂದು ತಿಳಿಸಿದರು.

ಕಾಲೇಜು ವಿದ್ಯಾರ್ಥಿಗಳು ವಾಹನ ಚಾಲನಾ ಪರವಾನಗಿ ಪಡೆಯಲು ಪ್ರಾದೇಶಿಕ ಸಾರಿಗೆ ಕಚೇರಿಗೆ ಅಲೆದಾಡಬೇಕಾಗಿತ್ತು. ಪರಿಷತ್ ಈ ಬಗ್ಗೆ ಸರ್ಕಾರದ ಗಮನ ಸೆಳೆದಿತ್ತು. ಹೀಗಾಗಿ ಇದೀಗ ಸಾರಿಗೆ ಅಧಿಕಾರಿಗಳೇ ಕಾಲೇಜುಗಳಿಗೆ ಆಗಮಿಸಿ ವಿದ್ಯಾರ್ಥಿಗಳಿಗೆ ಪರವಾನಗಿ ನೀಡಲಿದ್ದಾರೆ ಎಂದು ಹೇಳಿದರು.

ADVERTISEMENT

ಪರಿಷತ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಂಗಮೇಶ್ ಎಂ., ವಿನಾಯಕ್ ದೇಶಪಾಂಡೆ, ರಾಹುಲ್ ಗಾದಾ, ಪ್ರದೀಪ್ ಪಾಟೀಲ್, ಸೋಮನಾಥ ಸ್ವಾಮಿ, ರಾಹುಲ್ ಪಾಟೀಲ್, ಪುಷ್ಪಕ್ ಜಾಧವ್, ಪ್ರದೀಪ ಖಂಡ್ರೆ, ವಿಶಾಲ್ ಸ್ವಾಮಿ ಮೊದಲಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.