ADVERTISEMENT

‘ಬಾಲಕಾರ್ಮಿಕರ ಮುಕ್ತ ಜಿಲ್ಲೆಗೆ ಕೈಜೋಡಿಸಿ’

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2017, 6:57 IST
Last Updated 7 ಡಿಸೆಂಬರ್ 2017, 6:57 IST

ಬೀದರ್: ‘ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಕೈಜೋಡಿಸಬೇಕು’ ಎಂದು ಬಾಲ ನ್ಯಾಯ ಮಂಡಳಿ ಸದಸ್ಯ ಶಶಿಧರ ಕೋಸಂಬೆ ತಿಳಿಸಿದರು.

ನಗರದ ಅಕ್ಕಮಹಾದೇವಿ ಮಹಾವಿದ್ಯಾಲಯದಲ್ಲಿ ಈಚೆಗೆ ಆಯೋಜಿಸಿದ್ದ ಮಕ್ಕಳ ಸಂರಕ್ಷಣೆ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತವಾಗಿಸುವ ದಿಸೆಯಲ್ಲಿ ಮಕ್ಕಳ ಕಲ್ಯಾಣ ಸಮಿತಿ, ಬಾಲ ನ್ಯಾಯ ಮಂಡಳಿ, ಜಿಲ್ಲಾ ಕಾರ್ಮಿಕ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್‌ ಇಲಾಖೆ ಹಾಗೂ ಮಕ್ಕಳ ಸಹಾಯವಾಣಿಯಿಂದ ಯೋಜನೆ ರೂಪಿಸಲಾಗಿದೆ. ಅವುಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಸಾರ್ವಜನಿಕರು ಸಹಕರಿಸಬೇಕು’ ಎಂದು ಹೇಳಿದರು.

ADVERTISEMENT

‘ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗದಂತೆ ಪ್ರತಿಯೊಬ್ಬರು ಕಾಳಜಿ ವಹಿಸಬೇಕು’ ಎಂದು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಕವಿತಾ ಹುಷಾರೆ ಹೇಳಿದರು. ಸಮಿತಿ ಸದಸ್ಯೆ ಮಂಜುಳಾ ಮಾತನಾಡಿದರು.

ಪ್ರಾಚಾರ್ಯ ಶಿವನಾಥ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳ ರಕ್ಷಣಾಧಿಕಾರಿ ಪ್ರಶಾಂತ ಬಿರಾದಾರ್, ರವಿ ಬಿರಾದಾರ ಇದ್ದರು. ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯೆ ಡಾ. ಧನಲಕ್ಷ್ಮಿ ಪಾಟೀಲ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.