ADVERTISEMENT

ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ

ಬೀದರ್‌: ಮಕ್ಕಳ ರಂಗ ತರಬೇತಿ ಶಿಬಿರ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2018, 7:29 IST
Last Updated 25 ಏಪ್ರಿಲ್ 2018, 7:29 IST
ಬೀದರ್‌ನ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಮಕ್ಕಳ ರಂಗ ತರಬೇತಿ ಶಿಬಿರಕ್ಕೆ ಬಾಲಕರೊಬ್ಬರು ತಮಟೆ ಬಾರಿಸಿ ಚಾಲನೆ ನೀಡಿದರು.
ಬೀದರ್‌ನ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಮಕ್ಕಳ ರಂಗ ತರಬೇತಿ ಶಿಬಿರಕ್ಕೆ ಬಾಲಕರೊಬ್ಬರು ತಮಟೆ ಬಾರಿಸಿ ಚಾಲನೆ ನೀಡಿದರು.   

ಬೀದರ್: ‘ಮಕ್ಕಳಲ್ಲಿನ ಕಲಾ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸಬೇಕು’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಡಾ. ಬಸವರಾಜ ಬಲ್ಲೂರ ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಜಾನಪದ ಕಲಾವಿದರ ಬಳಗದ ಆಶ್ರಯದಲ್ಲಿ ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಮಂಗಳವಾರ ಮಕ್ಕಳ ರಂಗ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ರಂಗ ತರಬೇತಿಯಿಂದ ಮಕ್ಕಳಲ್ಲಿ ಆತ್ಮಸ್ಥೈರ್ಯ ವೃದ್ಧಿಸುತ್ತದೆ. ರಂಗಭೂಮಿಗೂ –ಸಾಹಿತ್ಯಕ್ಕೂ ಅವಿನಾಭಾವ ಸಂಬಂಧ ಇರುವ ಕಾರಣ ರಂಗ ಕಲೆಯ ಮೂಲಕ ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನೂ ಬೆಳೆಸಬಹುದಾಗಿದೆ’ ಎಂದು ಅವರು ಹೇಳಿದರು.

ADVERTISEMENT

ಜಿಲ್ಲಾ ಜಾನಪದ ಕಲಾವಿದರ ಬಳಗದ ಅಧ್ಯಕ್ಷ ವಿಜಯಕುಮಾರ ಸೋನಾರೆ ಮಾತನಾಡಿ, ‘ಮಕ್ಕಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಬೇಕು. ಅಂದಾಗ ಮಾತ್ರ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯವಿದೆ’ ಎಂದು ತಿಳಿಸಿದರು.

ರಂಗಭೂಮಿ ಕುರಿತು ರಾಯಚೂರಿನ ರಂಗ ನಿರ್ದೇಶಕ ಡಿಂಗ್ರಿ ನರೇಶ್‌ ಉಪನ್ಯಾಸ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಕೋಶಾಧ್ಯಕ್ಷ ಟಿ.ಎಂ. ಮಚ್ಚೆ, ಮಕ್ಕಳ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷೆ ಪಾರ್ವತಿ ಸೋನಾರೆ, ಶ್ರೀದೇವಿ ಹೂಗಾರ, ರಮೇಶ ಬಿರಾದಾರ, ಅಶೋಕಕುಮಾರ, ಬಿ.ಎ. ದಯಾಸಾಗರ, ರಾಜಕುಮಾರ ಗಾದಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.