ADVERTISEMENT

ಮತದಾನ: ಜಾಗೃತಿ ಅಭಿಯಾನ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2018, 6:38 IST
Last Updated 5 ಏಪ್ರಿಲ್ 2018, 6:38 IST

ಔರಾದ್: ತಾಲ್ಲೂಕಿನ ಸಂತಪುರದಲ್ಲಿ ಬುಧವಾರ ಆಶಾ ಕಾರ್ಯಕರ್ತೆಯರು ಮತ್ತು ವಿವಿಧ ಸ್ವಯಂ ಸೇವಾ ಸಂಸ್ಥೆಗಳ  ಆಶ್ರಯದಲ್ಲಿ ಮತದಾನ ಜಾಗೃತಿ ಜಾಥಾ ನಡೆಯಿತು.ಗ್ರಾಮ ಪಂಚಾಯಿತಿ ಕಚೇರಿಯಿಂದ ಹೊರಟ ಜಾಥಾ ಸರ್ಕಾರಿ ಆಸ್ಪತ್ರೆ, ಬಸವೇಶ್ವರ ವೃತ್ತದ ಮೂಲಕ ನಾಡ ಕಚೇರಿಗೆ ತಲುಪಿತು.ಕಂದಾಯ ನಿರೀಕ್ಷಕ ಅನ್ವರ್ ಜಕಾತಿ ಮಾತನಾಡಿ, ‘ಭಾರತ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಿಂತಿದೆ. ಈ ವ್ಯವಸ್ಥೆ ಸುಗಮವಾಗಿ ನಡೆಯಲು ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಈ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರು ಜನರಿಗೆ ಮನವರಿಕೆ ಮಾಡಿಕೊಡಬೇಕು’ ಎಂದು ಸಲಹೆ ನೀಡಿದರು.

ಉಪ ತಹಶೀಲ್ದಾರ್ ರಮೇಶ ಪಾಂಚಾಳ ಮಾತನಾಡಿ, ’ದೇಶದ ಸಂವಿಧಾನ ಪ್ರತಿಯೊಬ್ಬರಿಗೆ ಮತದಾನ ಹಕ್ಕು ನೀಡಿದೆ. ಯುವ ಮತದಾರರು ತಮ್ಮ ಮತಾಧಿಕಾರ ಚಲಾಯಿಸಬೇಕು. ಒಂದು ಸರ್ಕಾರ ರಚನೆಗೆ ಮತದಾರನ ಪಾತ್ರ ಮುಖ್ಯವಾಗಿದೆ. ಹೀಗಾಗಿ ಜನರಿಗೆ ಅತ್ಯುತ್ತಮ ಸರ್ಕಾರ ನೀಡುವವರಿಗೆ ತಮ್ಮ ಮತ ಹಾಕಬೇಕು’ ಎಂದು ಸಲಹೆ ನೀಡಿದರು.

ಗ್ರಾಮ ಪಂಚಾಯಿತಿ ಸಿಬ್ಬಂದಿ, ವಿವಿಧ ಸಂಘಟನೆಗಳ ಪ್ರಮುಖರು ಜಾಥಾದಲ್ಲಿ ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.