ಗುಲ್ಬರ್ಗ: ರಾಜ್ಯದಲ್ಲಿನ 5 ಜಿಲ್ಲಾ ಕೇಂದ್ರ ಗಳಲ್ಲಿ ನಡೆಯುತ್ತಿರುವ ದ್ವಿತೀಯ ಪಿಯುಸಿ ಉತ್ತರ ಪತ್ರಿಕೆ ಮೌಲ್ಯಮಾಪನ ಕಾರ್ಯಕ್ಕೆ ಉಪನ್ಯಾಸಕರು ಕಡ್ಡಾಯವಾಗಿ ಹಾಜರಾಗುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಮಾಡಿದ್ದು, ಈ ಆದೇಶ ಮೇರೆಗೆ ಎಲ್ಲ ಉಪನ್ಯಾಸಕರು ಹಾಗೂ ಪ್ರಾಚಾರ್ಯರು ಮೌಲ್ಯಮಾಪನ ಕಾರ್ಯಕ್ಕೆ ಹಾಜರಾಗುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಂ. ಸಾಳೂಂಕೆ ತಿಳಿಸಿದ್ದಾರೆ.
ಪ್ರಾಚಾರ್ಯ ಹಾಗೂ ಉಪನ್ಯಾಸಕರ ಸಂಘದಿಂದ ಬೇಡಿಕೆಗಳನ್ನು ಈಡೇರಿಸಲು ಮುಷ್ಕರ ನಡೆಸಲಾಗುತ್ತಿರುವುದರಿಂದ ಮೌಲ್ಯಮಾಪನ ಕಾರ್ಯ ನಿಗಧಿತ ಅವಧಿಯಲ್ಲಿ ಮುಕ್ತಾಯಗೊಳಿಸಲು ಅಡಚಣೆ ಉಂಟಾಗುತ್ತಿದೆ.
ಮುಷ್ಕರ ನಿರತ ಪ್ರಾಚಾರ್ಯರರು ಹಾಗೂ ಉಪನ್ಯಾಸಕರು ತಕ್ಷಣವೇ ಮೌಲ್ಯಮಾಪನ ಕಾರ್ಯಕ್ಕೆ ಕಡ್ಡಾಯವಾಗಿ ಹಾಜರಾಗಬೇಕು. ಮೌಲ್ಯಮಾಪನ ಕಾರ್ಯ ಮುಕ್ತಾಯಗೊಳಿಸಬೇಕು. ಇಲ್ಲದೆ ಇದ್ದಲ್ಲಿ ಮುಷ್ಕರ ನಿರತ ಸಿಬ್ಬಂದಿ ವಿರುದ್ಧ ಇಲಾಖೆಯ ನಿಯಮನುಸಾರ ಶಿಸ್ತಿನ ಕ್ರಮ ಜರುಗಿಸುತ್ತದೆ ಎಂದು ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.