ADVERTISEMENT

ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡಿ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2017, 6:35 IST
Last Updated 27 ನವೆಂಬರ್ 2017, 6:35 IST

ಬಸವಕಲ್ಯಾಣ: ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ನೀಡುವಂತೆ ಸರ್ಕಾರವನ್ನು  ಒತ್ತಾಯಿಸುವ ನಿರ್ಣಯವನ್ನು ಭಾನುವಾರ ಇಲ್ಲಿ ಸಮಾರೋಪಗೊಂಡ 38ನೇ ಅನುಭವ ಮಂಟಪ ಉತ್ಸವದಲ್ಲಿ ಅಂಗೀಕರಿಸಲಾಯಿತು.

ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಬಸವಣ್ಣನವರ ಹೆಸರಿಡಬೇಕು. ಡಾ.ಎಂ.ಎಂ.ಕಲಬುರ್ಗಿ ಅವರ ಹತ್ಯೆಗೈದವರನ್ನು ಶೀಘ್ರ ಬಂಧಿಸಬೇಕು. ಕವಯತ್ರಿ ಜಯದೇವಿತಾಯಿ ಲಿಗಾಡೆ ಸಮಾಧಿ ಸ್ಥಳವನ್ನು ಸ್ಮಾರಕವನ್ನಾಗಿ ಅಭಿವೃದ್ಧಿಪಡಿಸಬೇಕು. ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪಕ್ಕೆ ರಾಜ್ಯ ಸರ್ಕಾರ ₹600 ಕೋಟಿ ಬಿಡುಗಡೆ ಮಾಡಿ ಕಾಮಗಾರಿ ಆರಂಭಿಸಬೇಕು.

ಬಸವಕಲ್ಯಾಣ ಅಭಿವೃದ್ಧಿ ಮಂಡಳಿಯಿಂದ ನಡೆಯುತ್ತಿರುವ ಶರಣರ ಸ್ಮಾರಕಗಳ ಅಭಿವೃದ್ಧಿ ಕಾರ್ಯಗಳನ್ನು ಶೀಘ್ರ ಪೂರ್ಣಗೊಳಿಸಿ, ಈ ಸ್ಥಳಗಳನ್ನು ಪ್ರವಾಸಿ ತಾಣವಾಗಿಸಬೇಕು ಎಂಬ ನಿರ್ಣಯ ಕೈಗೊಳ್ಳಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.