ಬೀದರ್: ವಾಸವಿ ಕನ್ಯಕಾ ಪರಮೇಶ್ವರಿ ಜಯಂತಿಯನ್ನು ನಗರದಲ್ಲಿ ಶುಕ್ರವಾರ ಭಕ್ತಿ, ಶ್ರದ್ಧೆಯೊಂದಿಗೆ ಆಚರಿಸಲಾಯಿತು.
ಜಯಂತಿ ನಿಮಿತ್ತ ಅಲಂಕೃತ ವಾಹನದಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ವಾಸವಿ ಕನ್ಯಕಾ ಪರಮೇಶ್ವರಿ ಭಾವಚಿತ್ರದ ಮೆರವಣಿಗೆ ನಡೆಯಿತು.
ಕಳಶ ಹೊತ್ತ ಮಹಿಳೆಯರು, ಕಲಾ ತಂಡಗಳು ಮೆರವಣಿಗೆಯ ಸಂಭ್ರಮ ಹೆಚ್ಚಿಸಿದವು. ಯುವಕರು ಮಾತ್ರವಲ್ಲದೆ, ಮಹಿಳೆಯರೂ ಹೆಜ್ಜೆ ಮಾಡಿದ್ದು ವಿಶೇಷವಾಗಿತ್ತು.
ಬೆಳಿಗ್ಗೆ ದೇವಸ್ಥಾನದಲ್ಲಿ ಅಭಿಷೇಕ, ಕುಂಕುಮಾರ್ಚನೆ, ಪುಷ್ಪಾರ್ಚನೆ ಮತ್ತಿತರ ಧಾರ್ಮಿಕ ಕಾರ್ಯಕ್ರಮ ನಡೆದವು. ಸಂಗಯ್ಯ ರೇಜಂತಲ್, ಚಂದ್ರಶೇಖರ್ ಗಾದಾ, ದಿಗಂಬರ್ ಪೋಲಾ, ಅಶೋಕ್ ರೇಜಂತಲ್, ಶ್ರೀನಿವಾಸ್ ಮತ್ತಿತರರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.