ADVERTISEMENT

ವಿಜೃಂಭಣೆಯ ರಾಚೊಟೇಶ್ವರ ಜಾತ್ರೋತ್ಸವ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2011, 11:10 IST
Last Updated 10 ಸೆಪ್ಟೆಂಬರ್ 2011, 11:10 IST

ಚಿಟಗುಪ್ಪಾ: ಸಾವಿರಾರು ಭಕ್ತ ಸಮೂಹದ ಮಧ್ಯೆ ವಿಜೃಂಭಣೆಯಿಂದ ರಾಚೊಟೇಶ್ವರ ದೇವಾಲಯದ ಜಾತ್ರೋತ್ಸವ ಈಚೆಗೆ ಹುಮನಾಬಾದ್ ತಾಲ್ಲೂಕಿನ ಮುತ್ತಂಗಿ ಗ್ರಾಮದಲ್ಲಿ ನಡೆಯಿತು.

ಮೂರು ದಿನಗಳವರೆಗೆ ನಡೆದ ಜಾತ್ರೋತ್ಸವ ಕಾರ್ಯಕ್ರಮದಲ್ಲಿ ನಿರ್ಣಾ, ಮದರಗಿ, ಬಾದ್ರಾಪುರ, ಬಸೀರಾಪುರ, ಚಾಂಗಲೇರಾ, ಚಿಂಚೋಳಿ ಇತರೆಡೆಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು.
ಎರಡು ದಿನ ಆಗಮಿಸಿದ ಎಲ್ಲ ಭಕ್ತರಿಗೆ ದೇವಾಲಯದಿಂದ ಪ್ರಸಾದ ವ್ಯವಸ್ತೆ ಕಲ್ಪಿಸಲಾಗಿತ್ತು. ಜಿಲ್ಲಾ ಪಂಚಾಯಿತಿ ಸದಸ್ಯ ಪ್ರಭುಶೇಟ್ಟಿ ಮೆಂಗಾ, ಹುಮನಾಬಾದ್ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಹ್ಮದ್ ನೂರೋದ್ದೀನ್, ಸಬ್ ಇನ್‌ಸ್ಪೆಕ್ಟರ್ ಶ್ರೀಕಾಂತ ಅವರಿಗೆ ದೇವಾಲಯ ಸಮಿತಿ ಪದಾಧಿಕಾರಿಗಳು ಸನ್ಮಾನಿಸಿದರು.

ಕೊನೆಯ ದಿನ ಆರಂಭವಾದ ದೇವರ ಪಲ್ಲಕ್ಕಿ ಮೆರವಣಿಗೆ ಪುರವಂತರ ಪುರವಂತಿಗೆ, ಮಕ್ಕಳ ನೃತ್ಯ, ಕೋಲಾಟ, ಡೊಳ್ಳು ಕುಣಿತ, ಭಜನೆ, ವಾದ್ಯ ವೃಂದ, ಸಿಡಿಮದ್ದು ಗುಂಡುಗಳ ಮೂಲಕ ಗ್ರಾಮದ ಮುಖ್ಯ ಬೀದಿಗಳಲ್ಲಿ ಭವ್ಯವಾಗಿ ನಡೆಯಿತು. ಗ್ರಾಮದ ಎಲ್ಲ ಜಾತಿಯ ನಾಗರಿಕರು ಮೆರವಣಿಗೆಯಲ್ಲಿ ಪಾಲ್ಗೊಂಡು ಭಕ್ತಿಯಿಂದ ಪಲ್ಲಕ್ಕಿ ಉತ್ಸವಕ್ಕೆ ಪೂಜೆ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.