ADVERTISEMENT

ವಿದ್ಯಾರ್ಥಿಗಳಲ್ಲಿ ಕ್ರಿಯಾಶೀಲತೆ ಅಗತ್ಯ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2012, 9:25 IST
Last Updated 20 ಮಾರ್ಚ್ 2012, 9:25 IST

ಔರಾದ್: ವಿದ್ಯಾರ್ಥಿಗಳು ಸದಾ ಕ್ರಿಯಾಶೀಲರಾಗಿರುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಆರ್. ಬಸಪ್ಪ ಸಲಹೆ ನೀಡಿದರು.ತಾಲ್ಲೂಕಿನ ಮುಧೋಳ (ಬಿ) ಸರ್ಕಾರಿ ಪ್ರೌಢ ಶಾಲೆಯಲ್ಲಿ ಈಚೆಗೆ ನಡೆದ ಶಾಲಾ ವಾರ್ಷಿಕೋತ್ಸವ ಮತ್ತು ಹತ್ತನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
 
ಇಲ್ಲಿಯ ವಿದ್ಯಾರ್ಥಿಗಳು ಸಾಕಷ್ಟು ಪ್ರತಿಭಾವಂತರಿದ್ದಾರೆ. ಅವರು ಸ್ವಲ್ಪ ಕಷ್ಟಪಟ್ಟರೆ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ತರಬಲ್ಲರು ಎಂಬ ವಿಶ್ವಾಸ ವ್ಯಕ್ತಪಡಿಸಿದರು.ಪ್ರೌಢಶಾಲೆ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಪಾಂಡುರಂಗ ಬೆಲ್ದಾರ ಮಾತನಾಡಿ, ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಲು ಸಲಹೆ ನೀಡಿದರು.
 
ಸ್ಪರ್ಧೆ ಎದುರಿಸುವವರು ಮಾತ್ರ ಏನಾದರೂ ಸಾಧನೆ ಮಾಡಬಹುದು ಎಂದರು.
ರಾಜ್ಯ ಸರಕಾರಿ ನೌಕರ ಸಂಘದ ಕಾರ್ಯದರ್ಶಿ ಡಿ. ಜಾಕಿರ್ ಹುಸೇನ್ ಮಾತನಾಡಿ, ಹತ್ತನೇ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ಸೂಕ್ತ ಮಾರ್ಗದರ್ಶನ ಅಗತ್ಯ ಎಂದರು. ಶಾಲಾ ಸಮಿತಿ ಅಧ್ಯಕ್ಷ ಬಾಬುರಾವ್ ಗುಡ್ಡಾ ಅಧ್ಯಕ್ಷತೆ ವಹಿಸಿದರು.
 
ತಾಲ್ಲೂಕು ಪಂಚಾಯ್ತಿ ಗೌರಾಬಾಯಿ ರಾಠೋಡ, ಗ್ರಾಮ ಪಂಚಾಯ್ತಿ ಅಧ್ಯಕ್ಷ ದಯಾನಂದ, ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಗುರುನಾಥ ತವಾಡೆ, ಪೀರಪ್ಪ ಹೂಗೊಂಡ, ಶಿವಾಜಿರಾವ ಪಾಟೀಲ, ಬಸಪ್ಪ ಮಡಿವಾಳ, ಪ್ರಕಾಶ ಅಲ್ಮಾಜೆ ಉಪಸ್ಥಿತರಿದ್ದರು. ಸೂರ್ಯಕಾಂತ ಸಿಂಗೆ ಸ್ವಾಗತಿಸಿದರು. ಶಿಕ್ಷಕ ಅಸ್ಲಮ ನಿರೂಪಿಸಿದರು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.