ಬೀದರ್: ಜಿಲ್ಲೆಯ ಪ್ರತ್ಯೇಕ ಕಡೆಗಳಲ್ಲಿ ಬುಧವಾರ ಸಿಡಿಲು ಬಡಿದು ಮೂರು ಜಾನುವಾರುಗಳು ಮೃತಪಟ್ಟಿವೆ.
ಬೀದರ್ ತಾಲ್ಲೂಕಿನ ಚಟ್ನಳ್ಳಿ ಗ್ರಾಮದಲ್ಲಿ ಮುಸ್ತಫಾ ಎಂಬುವರಿಗೆ ಸೇರಿದ ಎರಡು ಎತ್ತುಗಳು ಸಿಡಿಲಿಗೆ ಬಲಿಯಾಗಿವೆ. ಎತ್ತುಗಳ ಮೌಲ್ಯ 60 ಸಾವಿರ ರೂಪಾಯಿ ಎಂದು ಅಂದಾಜಿಸಲಾಗಿದೆ.
ಹೊಲದಲ್ಲಿ ಇರುವ ಕೊಟ್ಟಿಗೆಯೊಂದರಲ್ಲಿ ಎತ್ತುಗಳನ್ನು ಕಟ್ಟಿ ಹಾಕಲಾಗಿತ್ತು. ಕೊಟ್ಟಿಗೆಗೆ ಸಿಡಿಲು ಅಪ್ಪಳಿಸಿದ್ದರಿಂದ ಎತ್ತುಗಳು ಸಾವನ್ನಪ್ಪಿವೆ. ಈ ಸಂಬಂಧ ಬಗದಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾಲ್ಕಿ ತಾಲ್ಲೂಕಿನ ಧನ್ನೂರಾ ಗ್ರಾಮದಲ್ಲಿ ಗುರುನಾಥ ಮಲ್ಲಪ್ಪ ಮೇತ್ರೆ ಎಂಬುವರಿಗೆ ಸೇರಿದ ಎಮ್ಮೆ ಸಿಡಿಲಿಗೆ ಬಲಿಯಾಗಿದೆ. ಎಮ್ಮೆಯ ಮೌಲ್ಯ 35 ಸಾವಿರ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಕುರಿತು ಧನ್ನೂರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿಡಿಲಿಗೆ ಎತ್ತು ಬಲಿ
ಔರಾದ್: ಸಮೀಪದ ಮುಂಗನಾಳದಲ್ಲಿ ಸಿಡಿಲು ಬಡಿದು ಎತ್ತು ಮೃತಪಟ್ಟ ಘಟನೆ ಬುಧವಾರ ಸಂಜೆ ನಡೆದಿದೆ.
ಸೋಪಾನ ಮಚಕುರಿ ಎಂಬ ರೈತನಿಗೆ ಸೇರಿದ ಸುಮಾರು 40 ಸಾವಿರ ಮೌಲ್ಯದ ಎತ್ತು ಮೃತಪಟ್ಟಿದೆ. ಸಂಜೆ ವೇಳೆ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.