ADVERTISEMENT

ಬೀದರ್: ಆಮ್ಲಜನಕ ಘಟಕಕ್ಕೆ ₹1 ಕೋಟಿ ಅನುದಾನ

​ಪ್ರಜಾವಾಣಿ ವಾರ್ತೆ
Published 6 ಜೂನ್ 2021, 14:56 IST
Last Updated 6 ಜೂನ್ 2021, 14:56 IST
ಬೀದರ್‌ನಲ್ಲಿ ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಶೈಲೇಂದ್ರ ಬೆಲ್ದಾಳೆ ಅವರು ಬ್ರಿಮ್ಸ್ ಆಸ್ಪತ್ರೆಯಲ್ಲಿ ಆಮ್ಲಜನಕ ಘಟಕ ಸ್ಥಾಪನೆಗೆ ಒದಗಿಸಲಾದ ₹1 ಕೋಟಿಯ ಚೆಕ್ ಪ್ರತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅವರಿಗೆ ನೀಡಿದರು

ಬೀದರ್: ಇಲ್ಲಿಯ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸ್ಥಾಪಿಸಲಿರುವ ಆಮ್ಲಜನಕ ಘಟಕಕ್ಕೆ ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮವು ₹1 ಕೋಟಿ ಅನುದಾನ ಒದಗಿಸಿದೆ.

‘ಈಗಾಗಲೇ ಜಿಲ್ಲಾಧಿಕಾರಿ ಖಾತೆಗೆ ಅನುದಾನ ಜಮಾ ಮಾಡಲಾಗಿದೆ’ ಎಂದು ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಘಟಕದಲ್ಲಿ 60 ಎಲ್‍ಪಿಎಂ ಆಮ್ಲಜನಕ ಉತ್ಪಾದನೆಯಾಗಲಿದೆ. ನಿತ್ಯ 135 ರಿಂದ 140 ಜಂಬೋ ಸಿಲಿಂಡರ್‌ಗಳು ಭರ್ತಿಯಾಗಲಿವೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.