ADVERTISEMENT

ಬ್ರಿಮ್ಸ್ ಮೂಲಸೌಕರ್ಯಕ್ಕೆ ₹10 ಕೋಟಿ ಹೆಚ್ಚುವರಿ ಅನುದಾನ: ಸಚಿವ ಪ್ರಭು ಚವಾಣ್

​ಪ್ರಜಾವಾಣಿ ವಾರ್ತೆ
Published 22 ಜೂನ್ 2021, 3:56 IST
Last Updated 22 ಜೂನ್ 2021, 3:56 IST
ಪ್ರಭು ಚವಾಣ್
ಪ್ರಭು ಚವಾಣ್   

ಬೀದರ್‌: ಇಲ್ಲಿಯ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕೇಂದ್ರೀಕೃತ ಗ್ರಂಥಾಲಯ ಹಾಗೂ ಪರೀಕ್ಷಾ ಕೊಠಡಿಗಳ ನಿರ್ಮಾಣಕ್ಕೆ ಪರಿಷ್ಕೃತ ₹10.77 ಕೋಟಿ ಅನುದಾನ ನೀಡಲು ಸೋಮವಾರ ನಡೆದ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ತಿಳಿಸಿದ್ದಾರೆ.

ಕೇಂದ್ರ ಪುರಸ್ಕೃತ ಯೋಜನೆ ಅಡಿಯಲ್ಲಿ ಈಗಾಗಲೇ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ₹36 ಕೋಟಿ ಮಂಜೂರು ಮಾಡಲಾಗಿದೆ. ಸಂಸ್ಥೆಯಲ್ಲಿ ಕೇಂದ್ರೀಕೃತ ಗ್ರಂಥಾಲಯ ಹಾಗೂ ಪರೀಕ್ಷಾ ಕೊಠಡಿ ನಿರ್ಮಾಣಕ್ಕೆ
₹7.50 ಕೋಟಿ, ಉಪಕರಣಗಳ ಖರೀದಿಗೆ ₹15.22 ಕೋಟಿ ಕೊಡಲಾಗಿದೆ ಎಂದು ಹೇಳಿದ್ದಾರೆ.

ಸೀಟುಗಳ ಮಿತಿ 100 ರಿಂದ 150 ಕ್ಕೆ ಹೆಚ್ಚಿಸಲಾಗಿದೆ. ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆ ಮೇಲ್ದರ್ಜೆಗೇರಿರುವುದರಿಂದ ಉಪನ್ಯಾಸಕರ ಕೊಠಡಿ, ಆಡಿಟೋರಿ ಯಂ, ತಾಯಿ ಮತ್ತು ಮಕ್ಕಳ ಆರೋಗ್ಯ ಕೇಂದ್ರ ಹಾಗೂ ವಸತಿನಿಲಯಗಳ ಉನ್ನತೀಕರಣ ಎಂ.ಸಿ.ಐ ಮಾನದಂಡಗಳ ಪ್ರಕಾರ ಸಂಸ್ಥೆಗಳ ಅವಶ್ಯಕತೆಗಳನ್ನು ಪೂರೈಸಸಲು ಸಹಕಾರಿಯಾಗಿದೆ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.