ADVERTISEMENT

ಬಾಲಕಿ ಕುಟುಂಬಕ್ಕೆ ₹10 ಲಕ್ಷ ಪರಿಹಾರಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2020, 16:24 IST
Last Updated 9 ಆಗಸ್ಟ್ 2020, 16:24 IST
ಬೀದರ್‌ನಲ್ಲಿ ಅಂಬಿಗರ ಚೌಡಯ್ಯ ಯುವ ಸೇನೆಯ ಸಂಸ್ಥಾಪಕ ಅಧ್ಯಕ್ಷ ಸುನೀಲ ಭಾವಿಕಟ್ಟಿ ಅವರು ಸಂಸದ ಭಗವಂತ ಖೂಬಾ ಅವರಿಗೆ ಮನವಿಪತ್ರ ಸಲ್ಲಿಸಿದರು
ಬೀದರ್‌ನಲ್ಲಿ ಅಂಬಿಗರ ಚೌಡಯ್ಯ ಯುವ ಸೇನೆಯ ಸಂಸ್ಥಾಪಕ ಅಧ್ಯಕ್ಷ ಸುನೀಲ ಭಾವಿಕಟ್ಟಿ ಅವರು ಸಂಸದ ಭಗವಂತ ಖೂಬಾ ಅವರಿಗೆ ಮನವಿಪತ್ರ ಸಲ್ಲಿಸಿದರು   

ಬೀದರ್‌: ಬೀದರ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಪ್ರಕರಣದ ತನಿಖೆ ನಡೆಸಬೇಕು ಹಾಗೂ ಸಂತ್ರಸ್ತೆಯ ಕುಟುಂಬಕ್ಕೆ ಸಂಸದರ ನಿಧಿಯಿಂದ ₹ 10 ಲಕ್ಷ ಪರಿಹಾರ ಕೊಡಬೇಕು ಎಂದು ಜಿಲ್ಲಾ ಟೋಕರೆ ಕೋಲಿ ಸಮಾಜ ಸಂಘ ಆಗ್ರಹಿಸಿದೆ.

ಜಿಲ್ಲಾ ಟೋಕರೆ ಕೋಲಿ ಸಮಾಜ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಗನ್ನಾಥ ಜಮಾದಾರ್ ಹಾಗೂ ಅಂಬಿಗರ ಚೌಡಯ್ಯ ಯುವ ಸೇನೆಯ ಸಂಸ್ಥಾಪಕ ಅಧ್ಯಕ್ಷ ಸುನೀಲ ಭಾವಿಕಟ್ಟಿ ಶನಿವಾರ ಸಂಸದ ಭಗವಂತ ಖೂಬಾ ಅವರನ್ನು ಭೇಟಿಯಾಗಿ ಅವರಿಗೆ ಮನವಿಪತ್ರಸಲ್ಲಿಸಿದರು.

ಬಡ ಕುಟುಂಬ ಬಾಲಕಿಯ ಮೇಲೆ ಅಮಾನವೀಯ ಕೃತ್ಯ ಎಸಗಲಾಗಿದೆ. ಈ ಘಟನೆಯನ್ನು ಉನ್ನತ ಮಟ್ಟದ ತನಿಖಾ ಸಂಸ್ಥೆಗೆ ವಹಿಸಬೇಕು. ತನಿಖೆ ನಡೆಸಿ ತಪ್ಪಿಸ್ಥರಿಗೆ ಕಠಿಣ ಶಿಕ್ಷೆ ಕೊಡಿಸಬೇಕು ಎಂದು ಮನವಿ ಮಾಡಿದರು.

ADVERTISEMENT

ಬಾಲಕಿಯ ಕುಟುಂಬಕ್ಕೆ 3 ಎಕರೆ ಜಮೀನು ಮಂಜೂರು ಮಾಡಲು ಸಂಬಂಧಪಟ್ಟವರಿಗೆ ಸರ್ಕಾರ ಶಿಫಾರಸು ಮಾಡಬೇಕು ಎಂದು ಪ್ರತಿಭಟನಕಾರರು ಮನವಿಯಲ್ಲಿಸಂಸದ ಭಗವಂತ ಖೂಬಾರನ್ನು ಒತ್ತಾಯಿಸಿದ್ದಾರೆ.

ಮುಖಂಡರಾದ ನಂದಕುಮಾರ ಜಮಗಿಕರ್, ಸಂಜುಕುಮಾರ ಸಿರ್ಸೆ, ರವೀಂದ್ರ ಬಾಲೆಬಾಯಿ, ಮಹೇಶ ಕೋಲಿ, ಸತೀಶ ಅಲಿಯಂಬರ್, ಚಂದ್ರಕಾಂತ ಹಳ್ಳಿಖಖೇಡಕರ್, ಶರಣಪ್ಪ ಶಾಶೆಂಪೂರ, ರವೀಂದ್ರ ಗುಮಾಸ್ತಿ ಹಾಗೂ ಸುರೇಶ ಅವರು ಈ ವೇಳೆಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.