ಬೀದರ್: ಜಿಲ್ಲೆಯಲ್ಲಿ ಭಾನುವಾರ ಅನಾವಶ್ಯಕವಾಗಿ ಸಂಚರಿಸುತ್ತಿದ್ದವರ 11 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್ ತಿಳಿಸಿದ್ದಾರೆ.
ಕೋವಿಡ್ ಸೋಂಕು ತಡೆ ಪ್ರಯುಕ್ತ ಮಾಸ್ಕ್ ಧರಿಸದ 1233 ಜನರ ವಿರುದ್ಧ ಪ್ರಕರಣ ದಾಖಲಿಸಿ, ₹1,23,300 ದಂಡ ವಿಧಿಸಲಾಗಿದೆ ಎಂದು ಹೇಳಿದ್ದಾರೆ.
ಲಾಕ್‍ಡೌನ್ ಕಾರಣ ಸಾರ್ವಜನಿಕರು ಮನೆಯಲ್ಲಿಯೇ ಇರಬೇಕು. ಅವಶ್ಯಕತೆ ಇದ್ದಾಗ ಮಾತ್ರ ಮನೆಯಿಂದ ಹೊರ ಬರಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.