ಬೀದರ್: ‘ಜಿಲ್ಲೆಯಲ್ಲಿ ಒಟ್ಟು 13,48,019 ಮತದಾರರಿದ್ದಾರೆ. ಇದರಲ್ಲಿ 6,96,687 ಪುರುಷರು ಹಾಗೂ 6,51,332 ಮಹಿಳಾ ಮತದಾರರು ಸೇರಿದ್ದಾರೆ’ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ತಿಳಿಸಿದ್ದಾರೆ.
ಸೋಮವಾರ (ಜ.22) ಅಂತಿಮ ಮತದಾರರ ಪಟ್ಟಿ ಹಾಗೂ ಸೇವಾ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಜಿಲ್ಲೆಯ ಎಲ್ಲ ಮತಗಟ್ಟೆ ಕೇಂದ್ರಗಳಲ್ಲಿ, ತಹಶೀಲ್ದಾರ್ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ ಹಾಗೂ ನಿಗದಿತ ಸ್ಥಳಗಳ ಸೂಚನಾ ಫಲಕಗಳಲ್ಲಿ ಅಂಟಿಸಲಾಗಿದೆ. ಜಿಲ್ಲೆಯ ಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಪರಿಶೀಲಿಸಿ ಖಾತ್ರಿಪಡಿಸಿಕೊಳ್ಳಬೇಕು. ಒಂದುವೇಳೆ ಮತದಾರರ ಪಟ್ಟಿಯಿಂದ ಹೆಸರು ಬಿಟ್ಟುಹೋದಲ್ಲಿ ಅಥವಾ ಹೆಸರು ಸೇರ್ಪಡೆಗೆ ಕಾಲಾವಕಾಶ ಇದೆ. ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.