ADVERTISEMENT

ಪ್ರಥಮ ದರ್ಜೆ ಕಾಲೇಜಿಗೆ 15 ಕಂಪ್ಯೂಟರ್ ವಿತರಣೆ

​ಪ್ರಜಾವಾಣಿ ವಾರ್ತೆ
Published 21 ಜನವರಿ 2022, 14:45 IST
Last Updated 21 ಜನವರಿ 2022, 14:45 IST
ರೋಟರಿ ಕ್ಲಬ್ ಬೀದರ್ ವತಿಯಿಂದ ಔರಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಒದಗಿಸಿದ ಕಂಪ್ಯೂರ್‌ ಕೊಠಡಿಯನ್ನು ಕ್ಲಬ್ ಅಧ್ಯಕ್ಷ ಪ್ರಕಾಶ ಟೊಣ್ಣೆ ಉದ್ಘಾಟಿಸಿದರು
ರೋಟರಿ ಕ್ಲಬ್ ಬೀದರ್ ವತಿಯಿಂದ ಔರಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಒದಗಿಸಿದ ಕಂಪ್ಯೂರ್‌ ಕೊಠಡಿಯನ್ನು ಕ್ಲಬ್ ಅಧ್ಯಕ್ಷ ಪ್ರಕಾಶ ಟೊಣ್ಣೆ ಉದ್ಘಾಟಿಸಿದರು   

ಬೀದರ್: ರೋಟರಿ ಕ್ಲಬ್ ಬೀದರ್ ವತಿಯಿಂದ ಕಾಂಗ್ನಿಜೆಂಟ್ ತಂತ್ರಜ್ಞಾನವು ರಾಜ್ಯ ಸರ್ಕಾರಕ್ಕೆ ಉಚಿತವಾಗಿ ನೀಡಿರುವ 15 ಕಂಪ್ಯೂಟರ್‌ಗಳನ್ನು ಔರಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ವಿತರಿಸಲಾಯಿತು.

ಕಾಂಗ್ನಿಜೆಂಟ್ ತಂತ್ರಜ್ಞಾನವು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಕೊಡಲು ರಾಜ್ಯ ಸರ್ಕಾರಕ್ಕೆ ಉಚಿತವಾಗಿ ಕಂಪ್ಯೂಟರ್‌ಗಳನ್ನು ನೀಡಿದೆ. ಅವುಗಳನ್ನು ಕಾಲೇಜುಗಳಿಗೆ ತಲುಪಿಸುವ ಹೊಣೆಗಾರಿಕೆಯನ್ನು ರೋಟರಿ ಸಂಸ್ಥೆಗೆ ವಹಿಸಲಾಗಿದೆ ಎಂದು ರೋಟರಿ ಕ್ಲಬ್ ಬೀದರ್ ಅಧ್ಯಕ್ಷ ಪ್ರಕಾಶ ಟೊಣ್ಣೆ ತಿಳಿಸಿದರು.

ಆಧುನಿಕ ಯುಗದಲ್ಲಿ ಕಂಪ್ಯೂಟರ್ ಜ್ಞಾನ ಎಲ್ಲರಿಗೂ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ಕಂಪ್ಯೂಟರ್‍ಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ADVERTISEMENT

ಇದಕ್ಕೂ ಮೊದಲು ಕ್ಲಬ್ ಪದಾಧಿಕಾರಿಗಳು ಕಾಲೇಜು ಮುಖ್ಯಸ್ಥರಿಗೆ ಕಂಪ್ಯೂಟರ್‌ಗಳನ್ನು ಹಸ್ತಾಂತರಿಸಿದರು.
ಅಂತರರಾಷ್ಟ್ರೀಯ ರೋಟರಿ ಜಿಲ್ಲೆ 3160 ಕಾರ್ಯದರ್ಶಿ ಶಿವಶಂಕರ ಕಾಮಶೆಟ್ಟಿ, ಕ್ಲಬ್ ಕಾರ್ಯದರ್ಶಿ ಅನಿಲಕುಮಾರ ಔರಾದೆ, ಕಾಲೇಜು ಪ್ರಾಚಾರ್ಯ ಸೂರ್ಯಕಾಂತ ಚಿದ್ರೆ, ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥೆ ಸಪ್ನಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.