ಔರಾದ್: ಅಕ್ರಮವಾಗಿ ಸಾಗಿಸುತ್ತಿದ್ದ 150 ಕ್ವಿಂಟಲ್ ಪಡಿತರ ಅಕ್ಕಿಯನ್ನು ಪೊಲೀಸರು ಭಾನುವಾರ ಸಂಜೆ ಜಪ್ತಿ ಮಾಡಿಕೊಂಡಿದ್ದಾರೆ.
ಔರಾದ್‍ನಿಂದ ಮಹಾರಾಷ್ಟ್ರ ಕಡೆ ಹೋಗುತ್ತಿರುವ ಲಾರಿ ನಾರಾಯಣಪುರ ಬಳಿ ತಡೆದು ವಿಚಾರಣೆ ನಡೆಸಿದಾಗ ಅಕ್ರಮ ಅಕ್ಕಿ ಸಾಗಾಟ ಪ್ರಕರಣ ಬೆಳಕಿಗೆ ಬಂದಿದೆ. ಲಾರಿ ಚಾಲಕನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಗುಜರಾತ್‍ಗೆ ಅಕ್ಕಿ ಸಾಗಿಸುತ್ತಿರುವ ಮಾಹಿತಿ ಸಿಕ್ಕಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.