ಬೀದರ್: ನಗರದ ಸಿದ್ದಿ ವಿನಾಯಕ ದರ್ಶಿನಿ ಉಡುಪಿ ಹೋಟೆಲ್ ಮೇಲೆ ಬುಧವಾರ ದಾಳಿ ನಡೆಸಿರುವ ಆಹಾರ ಇಲಾಖೆಯ ಅಧಿಕಾರಿಗಳು ಗೃಹ ಬಳಕೆಯ 19 ಎಲ್‌ಪಿಜಿ ಸಿಲಿಂಡರ್‌ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಉಪವಿಭಾಗಾಧಿಕಾರಿ ಲವೀಶ್ ಒರ್ಡಿಯಾ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಆಹಾರ ಇಲಾಖೆಯ ಅರುಣ್, ಅಮಿತ್ ಹಾಗೂ ಪೊಲೀಸರು ಪಾಲ್ಗೊಂಡಿದ್ದರು. ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಗೃಹ ಬಳಕೆಯ ಸಿಲಿಂಡರ್‌ಗಳನ್ನು ವಾಣಿಜ್ಯ ಸ್ಥಳಗಳಲ್ಲಿ ಬಳಸುವುದು ಶಿಕ್ಷಾರ್ಹ ಅಪರಾಧವಾಗಿದೆ’ ಎಂದು ಲವೀಶ್ ಒರ್ಡಿಯಾ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.