ADVERTISEMENT

53 ಜನ ಅಸ್ವಸ್ಥ: ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2017, 5:48 IST
Last Updated 11 ಅಕ್ಟೋಬರ್ 2017, 5:48 IST
ಭಾಲ್ಕಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಂಗಳವಾರ ವಾಂತಿಭೇದಿ ಪ್ರಕರಣದಿಂದ ದಾಖಲಾದ ಲಖಣಗಾಂವ ಗ್ರಾಮದ ಜನರಿಗೆ ವೈದ್ಯರು ಚಿಕಿತ್ಸೆ ನೀಡಿದರು
ಭಾಲ್ಕಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಂಗಳವಾರ ವಾಂತಿಭೇದಿ ಪ್ರಕರಣದಿಂದ ದಾಖಲಾದ ಲಖಣಗಾಂವ ಗ್ರಾಮದ ಜನರಿಗೆ ವೈದ್ಯರು ಚಿಕಿತ್ಸೆ ನೀಡಿದರು   

ಭಾಲ್ಕಿ: ತಾಲ್ಲೂಕಿನ ಲಖಣಗಾಂವ ಗ್ರಾಮದಲ್ಲಿ ವಾಂತಿಭೇದಿ ಕಾಣಿಸಿಕೊಂಡು 53ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿದ್ದಾರೆ. ಭಾನುವಾರ ರಾತ್ರಿ ಗ್ರಾಮದಲ್ಲಿ ನಡೆದ ಧಾರ್ಮಿಕ ಪ್ರಾರ್ಥನಾ ಕಾರ್ಯಕ್ರಮದಲ್ಲಿ ವಿತರಿಸಲಾದ ಕಡಲೆ ಬೀಜದಿಂದ ತಯಾರಿಸಿದ (ಉಸುಳೆ) ಪ್ರಸಾದ ಸೇವನೆಯೇ ವಾಂತಿಭೇದಿಗೆ ಕಾರಣ ಎಂದು ಹೇಳಲಾಗುತ್ತಿದೆ.

ಮಂಗಳವಾರ ವಾಂತಿಭೇದಿ ಪ್ರಕರಣದಿಂದ ಬಳಲುತ್ತಿರುವ ಸಂಖ್ಯೆ ಹೆಚ್ಚಾಗಿದ್ದು, ಮಕ್ಕಳು, ಮಹಿಳೆಯರು ಸೇರಿ 53 ಜನರು ಅಸ್ವಸ್ಥಗೊಂಡಿದ್ದಾರೆ. 19 ರೋಗಿಗಳಿಗೆ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಉಳಿದ 34 ರೋಗಿಗಳಿಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ವಾಂತಿಭೇದಿ ಪ್ರಕರಣ ಬೆಳಕಿಗೆ ಬರುತ್ತಲೆ ಆರೋಗ್ಯ ಇಲಾಖೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಎ.ಜಬ್ಬಾರ್ ನೇತೃತ್ವದ ವೈದ್ಯರ ತಂಡ ಭಾಲ್ಕಿಯ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.