ADVERTISEMENT

ಸಾರಿಗೆ ಸಂಸ್ಥೆ ನೌಕರರಿಂದ ಧರಣಿ

ಕಾರ್ಯಕರ್ತರ ವಿರುದ್ಧದ ಪ್ರಕರಣ ಕೈಬಿಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 26 ಜನವರಿ 2018, 6:54 IST
Last Updated 26 ಜನವರಿ 2018, 6:54 IST

ಬೀದರ್: ವಜಾಗೊಳಿಸಲಾದ ನೌಕರರನ್ನು ಪುನರ್ ನೇಮಕ ಮಾಡಿಕೊಳ್ಳಬೇಕು ಎನ್ನುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆ.ಎಸ್.ಆರ್.ಟಿ.ಸಿ. ಸ್ಟಾಫ್ ಆ್ಯಂಡ್ ವರ್ಕರ್ಸ್ ಯೂನಿಯನ್ ಕಾರ್ಯಕರ್ತರು ನಗರದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ಕಚೇರಿ ಎದುರು ಗುರುವಾರ ಧರಣಿ ಸತ್ಯಾಗ್ರಹ ನಡೆಸಿದರು.

ಹತ್ತು ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ವಿಭಾಗೀಯ ನಿಯಂತ್ರಣಾಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಳುಹಿಸಿದರು.

ಮುಷ್ಕರಕ್ಕೆ ಸಂಬಂಧಿಸಿದಂತೆ ಸಂಘದ ಕಾರ್ಯರ್ಕರ ವಿರುದ್ಧ ಸಲ್ಲಿಸಲಾದ ದೋಷಾರೋಪಣೆ ಪಟ್ಟಿ ಹಾಗೂ ಪ್ರಕರಣಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು.

ADVERTISEMENT

ಮಾನ್ಯತೆ ಪಡೆದಿರುವ ವಿಭಾಗೀಯ ಸಂಘಟನೆಗಳಿಗೆ ಪಾಸ್‌ಗಳನ್ನು ಕೊಡಬೇಕು. ಎನ್‍ಐಎನ್‌ಸಿ ಪ್ರಕರಣಗಳಲ್ಲಿ ನಿರ್ವಾಹಕರನ್ನು ಜವಾಬ್ದಾರರನ್ನಾಗಿ ಮಾಡಬಾರದು. ಕಾರ್ಮಿಕ ಸಂಘದ ಮಾನ್ಯತೆಗಾಗಿ 1991ರ ನಿಯಮಾವಳಿ ಪ್ರಕಾರ ಚುನಾವಣೆ ನಡೆಸಬೇಕು. ನಾಲ್ಕೂ ಸಾರಿಗೆ ನಿಗಮಗಳನ್ನು ಸೇರಿಸಿ ಒಂದೇ ನಿಗಮ ಮಾಡಬೇಕು. ಮಂಗಳೂರು, ಪುತ್ತೂರು ವಿಭಾಗಗಳಿಂದ ವರ್ಗಾವಣೆಗೊಂಡ ಎಲ್ಲ ನೌಕರರನ್ನು ಬಿಡುಗಡೆಗೊಳಿಸಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.