ADVERTISEMENT

ಬಿಜೆಪಿ ಅಧಿಕಾರಕ್ಕೆ ಬಂದರೆ ಶಿಕ್ಷಕರ ಸಮಸ್ಯೆಗೆ ಸ್ಪಂದನೆ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2018, 6:41 IST
Last Updated 3 ಫೆಬ್ರುವರಿ 2018, 6:41 IST
ಬೀದರ್‌ನಲ್ಲಿ ಈಚೆಗೆ ಏರ್ಪಡಿಸಿದ್ದ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಸರ್ವ ಸದಸ್ಯರ ವಾರ್ಷಿಕ ಸಭೆಯಲ್ಲಿ ಡಾ. ಕೆ. ಹನುಮಂತಪ್ಪ, ಜಗದ್ಗುರು ಶಿವಯೋಗೀಶ್ವರ ರಾಜಯೋಗೇಂದ್ರ ಸ್ವಾಮೀಜಿ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಇದ್ದರು

ಬೀದರ್: ‘ಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅನುದಾನಿತ ಶಾಲೆಗಳ ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಲಿದೆ’ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಹೇಳಿದರು.

ನಗರದಲ್ಲಿ ಈಚೆಗೆ ನಡೆದ ಕರ್ನಾಟಕ ರಾಜ್ಯ ಅನುದಾನಿತ ಪಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಸರ್ವ ಸದಸ್ಯರ ವಾರ್ಷಿಕ ಸಭೆಯಲ್ಲಿ ಅವರು ಮಾತನಾಡಿದರು. ‘ಅನುದಾನಿತ ಹಾಗೂ ಸರ್ಕಾರಿ ಶಾಲೆಗಳ ಶಿಕ್ಷಕರ ನಡುವಿನ ತಾರತಮ್ಯಗಳನ್ನು ನಿವಾರಿಸಲಿದೆ’ ಎಂದು ತಿಳಿಸಿದರು.

ಜಗದ್ಗುರು ಶಿವಯೋಗೀಶ್ವರ ರಾಜಯೋಗೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಡಾ. ಕೆ. ಹನುಮಂತಪ್ಪ ಉದ್ಘಾಟಿಸಿದರು. ಶ್ರೀನಿವಾಸ ಬರೂರಕರ್ ಅಧ್ಯಕ್ಷತೆ ವಹಿಸಿದ್ದರು. ಅಶೋಕ ತೆಲಂಗ್‌ ಸ್ವಾಗತಿಸಿದರು. ಅನಂತ ಕುಲಕರ್ಣಿ ನಿರೂಪಿಸಿದರು. ಸಂಜಯ ಕುಲಕರ್ಣಿ ವಂದಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.