ADVERTISEMENT

‘ಬಸವಕಲ್ಯಾಣಕ್ಕೆ ಖೂಬಾ ಅವರೇ ಅಭ್ಯರ್ಥಿ’

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2018, 8:59 IST
Last Updated 19 ಫೆಬ್ರುವರಿ 2018, 8:59 IST
ಮಲ್ಲಿಕಾರ್ಜುನ ಖೂಬಾ
ಮಲ್ಲಿಕಾರ್ಜುನ ಖೂಬಾ   

ಬೀದರ್: ‘ವಿಧಾನಸಭಾ ಚುನಾವಣೆಗೆ ಜೆಡಿಎಸ್‌ನಿಂದ ಕಣಕ್ಕಿಳಿಯುವ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದೆ. ಕಾರಣಾಂತರದಿಂದ ಬಸವಕಲ್ಯಾಣ ಕ್ಷೇತ್ರದ ಶಾಸಕ ಮಲ್ಲಿಕಾರ್ಜುನ ಖೂಬಾ ಅವರ ಹೆಸರು ಪ್ರಕಟಗೊಂಡಿಲ್ಲ. ಅದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯ ಇಲ್ಲ’ ಎಂದು ಜೆಡಿಎಸ್‌ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಕೇಶಪ್ಪ ಬಿರಾದಾರ ಹೇಳಿದ್ದಾರೆ.

‘ಮಲ್ಲಿಕಾರ್ಜುನ ಖೂಬಾ 2004 ಹಾಗೂ 2013ರಲ್ಲಿ ಆಯ್ಕೆಯಾಗಿರುವ ಕಾರಣ ಅವರಿಗೆ ಪಕ್ಷ ಈ ಬಾರಿಯೂ ಅವಕಾಶ ಕಲ್ಪಿಸಲಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕುಮಾರಸ್ವಾಮಿ ಈಚೆಗೆ ಬಸವಕಲ್ಯಾಣಕ್ಕೆ ಬಂದಿದ್ದ ಸಂದರ್ಭದಲ್ಲಿ ಖೂಬಾ ಅವರೇ ಈ ಕ್ಷೇತ್ರದ ಅಭ್ಯರ್ಥಿ ಎಂದು ಘೋಷಣೆ ಮಾಡಿ ಹೋಗಿದ್ದಾರೆ. ಎರಡನೇ ಹಂತದ ಪಟ್ಟಿಯಲ್ಲಿ ಅವರ ಹೆಸರು ಪ್ರಕಟವಾಗಲಿದೆ’ ಎಂದು ತಿಳಿಸಿದ್ದಾರೆ.

‘ಬೀದರ್‌ ದಕ್ಷಿಣದಿಂದ ಬಂಡೆಪ್ಪ ಕಾಶೆಂಪುರ, ಹುಮನಾಬಾದ್‌ ಕ್ಷೇತ್ರದಿಂದ ನಸೀಮೊದ್ದಿನ್ ಪಟೇಲ್‌ ಹಾಗೂ ಬಸವಕಲ್ಯಾಣಕ್ಕೆ ಮಲ್ಲಿಕಾರ್ಜುನ ಖೂಬಾ ಎಂದು ಮೊದಲೇ ನಿರ್ಧಾರವಾಗಿದೆ. ಬೀದರ್‌ ಕ್ಷೇತ್ರವನ್ನು ಬಿಎಸ್‌ಪಿಗೆ ಬಿಟ್ಟುಕೊಡಲಾಗಿದೆ. ಔರಾದ್‌ ಕ್ಷೇತ್ರದ ಅಭ್ಯರ್ಥಿಯನ್ನು ಆಯ್ಕೆ ಮಾಡಿಲ್ಲ’ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.