ADVERTISEMENT

ಜಿಲ್ಲೆಯಲ್ಲಿ 60 ಉದ್ದು, ಹೆಸರು ಖರೀದಿ ಕೇಂದ್ರ ಶುರು

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2020, 15:15 IST
Last Updated 18 ಸೆಪ್ಟೆಂಬರ್ 2020, 15:15 IST
ಬೀದರ್‌ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೆಸರು ಹಾಗೂ ಉದ್ದು ಖರೀದಿ ಕೇಂದ್ರಕ್ಕೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಮಾತನಾಡಿದರು
ಬೀದರ್‌ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೆಸರು ಹಾಗೂ ಉದ್ದು ಖರೀದಿ ಕೇಂದ್ರಕ್ಕೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಮಾತನಾಡಿದರು   

ಬೀದರ್: ಜಿಲ್ಲೆಯಲ್ಲಿ 60 ಹೆಸರು ಮತ್ತು ಉದ್ದು ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ
ರಾಮಚಂದ್ರನ್ ಆರ್. ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, 2020-21ನೇ ಸಾಲಿಗೆ ಕೇಂದ್ರ ಸರ್ಕಾರ ಘೋಷಿಸಿರುವ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಸಹಕಾರ ಇಲಾಖೆಯ ನಿರ್ದೇಶನದ ಅನುಸಾರ ಮಾರ್ಕ್‍ಫೆಡ್ ಮೂಲಕ ಉದ್ದು, ಹೆಸರು ಖರೀದಿಗೆ ಆದೇಶ ಹೊರಡಿಸಲಾಗಿದೆ ಎಂದು ಹೇಳಿದರು.

ಹೆಸರು ಕಾಳು ಪ್ರತಿ ಎಕರೆಗೆ ನಾಲ್ಕು ಕ್ವಿಂಟಲ್ ಗರಿಷ್ಠ ಹಾಗೂ ಪ್ರತಿ ರೈತರಿಂದ ಗರಿಷ್ಠ ನಾಲ್ಕು ಕ್ವಿಂಟಲ್‍ಗೆ ಕನಿಷ್ಠ ಬೆಂಬಲ ಬೆಲೆ ಕ್ವಿಂಟಲ್‍ಗೆ ರೂ. 7,196 ಮತ್ತು ಉದ್ದಿನ ಕಾಳು ಪ್ರತಿ ಎಕರೆಗೆ ಮೂರು ಕ್ವಿಂಟಲ್ ಗರಿಷ್ಠ ಹಾಗೂ ಪ್ರತಿ ರೈತರಿಂದ ಆರು ಕ್ವಿಂಟಲ್‍ಗೆ ಕನಿಷ್ಠ ಬೆಂಬಲ ಬೆಲೆ ಪ್ರತಿ ಕ್ವಿಂಟಲ್‍ಗೆ ರೂ. 6,000 ನಿಗದಿಪಡಿಸಲಾಗಿದೆ. ರೈತರು ಕೇಂದ್ರಗಳ ಪ್ರಯೋಜನ ಪಡೆಯಬೇಕು ಎಂದು ತಿಳಿಸಿದರು.

ADVERTISEMENT

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬೀದರ್ ಉಪ ವಿಭಾಗಾಧಿಕಾರಿ ಗರೀಮಾ ಪನವಾರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ತಾರಾಮಣಿ ಜಿ.ಎಚ್., ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕ ತುಳಸಿರಾಮ ಲಾಖೆ ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.