ADVERTISEMENT

ಸಿಇಟಿ ಬರೆದ 7717 ವಿದ್ಯಾರ್ಥಿಗಳು

ಕೋವಿಡ್‌ ಪಾಸಿಟಿವ್‌ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಸ್ಥಳದಲ್ಲಿ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 31 ಜುಲೈ 2020, 15:20 IST
Last Updated 31 ಜುಲೈ 2020, 15:20 IST
ಬೀದರ್‌ನ ಸಿದ್ಧಾರ್ಥ ಪದವಿ ಪೂರ್ವ ಕಾಲೇಜಿನ ಸಿಇಟಿ ಕೇಂದ್ರದಲ್ಲಿ ಪರೀಕ್ಷೆ ಬರೆದು ಹೊರ ಬಂದ ವಿದ್ಯಾರ್ಥಿಗಳು
ಬೀದರ್‌ನ ಸಿದ್ಧಾರ್ಥ ಪದವಿ ಪೂರ್ವ ಕಾಲೇಜಿನ ಸಿಇಟಿ ಕೇಂದ್ರದಲ್ಲಿ ಪರೀಕ್ಷೆ ಬರೆದು ಹೊರ ಬಂದ ವಿದ್ಯಾರ್ಥಿಗಳು   

ಬೀದರ್‌: ಜಿಲ್ಲೆಯ 28 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 8240 ವಿದ್ಯಾರ್ಥಿಗಳ ಪೈಕಿ ಬೆಳಿಗ್ಗೆ ನಡೆದ ಪರೀಕ್ಷೆಯಲ್ಲಿ 7717 ವಿದ್ಯಾರ್ಥಿಗಳು ಉತ್ತರ ಬರೆದರು. 523 ವಿದ್ಯಾರ್ಥಿಗಳು ಬಂದಿರಲಿಲ್ಲ. ಮಧ್ಯಾಹ್ನ ನಡೆದ ಪರೀಕ್ಷೆಯಲ್ಲಿ 7712 ವಿದ್ಯಾರ್ಥಿಗಳು ಉತ್ತರ ಬರೆದರು. 528 ವಿದ್ಯಾರ್ಥಿಗಳು ಗೈರಾಗಿದ್ದರು

ಇಬ್ಬರು ಕೋವಿಡ್‌ ಪಾಸಿಟಿವ್ ವಿದ್ಯಾರ್ಥಿಗಳಿಗೆ ನಗರದ ಝೀರಾ ಕನ್ವೆನ್ಶನ್ ಹಾಲ್‌ನಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿತ್ತು. ವೈದ್ಯಕೀಯ ಸಿಬ್ಬಂದಿ ಸುರಕ್ಷತಾ ಕವಚನಗಳನ್ನು ಧರಿಸಿ ಬೆಳಿಗ್ಗೆ ಥರ್ಮಲ್‌ ಸ್ಕ್ಯಾನಿಂಗ್‌ ಮಾಡಿದರು.

ಇಲ್ಲಿ ಒಬ್ಬ ವೈದ್ಯರನ್ನು ಹಾಗೂ ನೋಡಲ್ ಅಧಿಕಾರಿಯನ್ನು ನಿಯೋಜಿಸಲಾಗಿತ್ತು. ಪರೀಕ್ಷೆ ಬರೆದ ನಂತರ ಉತ್ತರ ಪತ್ರಿಕೆಗಳನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ಹಾಕಿ ಅಲ್ಯೂನಿಮಿಯಂ ಬಾಕ್ಸ್‌ನಲ್ಲಿ ಇಡಲಾಯಿತು. ಬಾಕ್ಸ್‌ಗೆ ಸೋಂಕು ನಿವಾರಕ ಸಿಂಪಡಿಸಿ ಕಳಿಸಿಕೊಡಲಾಯಿತು.

ADVERTISEMENT

ಜಿಲ್ಲೆಯ ಎಲ್ಲ ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಸುಸೂತ್ರವಾಗಿ ನಡೆದಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಮೇಶ ಬೆಜಗಂ ತಿಳಿಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.