ADVERTISEMENT

ಕುಶಲಕರ್ಮಿಗಳಿಗೆ ಉಜ್ವಲ ಭವಿಷ್ಯ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2022, 6:40 IST
Last Updated 29 ಸೆಪ್ಟೆಂಬರ್ 2022, 6:40 IST
ಬೀದರ್‌ನ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಶಿಕ್ಷಕ ಪರ್ವ ಕಾರ್ಯಕ್ರಮವನ್ನು ಹುಲಸೂರಿನ ಶಿವಾನಂದ ಸ್ವಾಮೀಜಿ ಉದ್ಘಾಟಿಸಿದರು
ಬೀದರ್‌ನ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಶಿಕ್ಷಕ ಪರ್ವ ಕಾರ್ಯಕ್ರಮವನ್ನು ಹುಲಸೂರಿನ ಶಿವಾನಂದ ಸ್ವಾಮೀಜಿ ಉದ್ಘಾಟಿಸಿದರು   

ಬೀದರ್: ಕೌಶಲ ಹೊಂದಿದ ಐಟಿಐ ಕುಶಲಕರ್ಮಿಗಳಿಗೆ ಉಜ್ವಲ ಭವಿಷ್ಯ ಇದೆ ಎಂದು ಕೈಗಾರಿಕೆ ತರಬೇತಿ, ಉದ್ಯೋಗ ಇಲಾಖೆಯ ಕಲಬುರಗಿ ವಿಭಾಗದ ಜಂಟಿ ನಿರ್ದೇಶಕ ರಾಜೇಶ ಬಾವಗಿ ನುಡಿದರು. ಇಲ್ಲಿಯ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಶಿಕ್ಷಕ ಪರ್ವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಐಟಿಐ ತರಬೇತುದಾರರು ಕೌಶಲ ಅಳವಡಿಸಿಕೊಂಡಲ್ಲಿ ಕೌಶಲ ಭಾರತದ ಕನಸು ನನಸಾಗಲಿದೆ ಎಂದು ತಿಳಿಸಿದರು. ಜಿಲ್ಲಾ ನೋಡಲ್ ಅಧಿಕಾರಿ ಶಿವಶಂಕರ ಟೋಕರೆ ಮಾತನಾಡಿದರು. ಸಹ ಶಿಕ್ಷಕ ಶಿವಲಿಂಗ ಹೇಡೆ ವಿಶೇಷ ಉಪನ್ಯಾಸ ನೀಡಿದರು. ಸಿಪಿಐ ಕೃಷ್ಣಕುಮಾರ ಪಾಟೀಲ ಕಾರ್ಯಕ್ರಮ ಉದ್ಘಾಟಿಸಿದರು. ಹುಲಸೂರಿನ ಶಿವಾನಂದ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.

20 ಕಿರಿಯ ತರಬೇತಿ ಅಧಿಕಾರಿಗಳಿಗೆ ಕೌಶಲ ರಶ್ಮಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಕಾಶ ಜನವಾಡಕರ್ ಸ್ವಾಗತಿಸಿದರು. ಬಾಬು ಪ್ರಭಾಜಿ ನಿರೂಪಿಸಿದರು. ಪ್ರಶಾಂತ ಜ್ಯಾಂತಿಕರ್ ವಂದಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.