ಸಾವು
ಪ್ರಾತಿನಿಧಿಕ ಚಿತ್ರ
ಬರೂರು (ಬೀದರ್ ತಾಲ್ಲೂಕು): ಮಳೆ ನೀರಲ್ಲಿ ಮುಳುಗಿದ ಸೇತುವೆ ದಾಟುವಾಗ ವ್ಯಕ್ತಿಯೊಬ್ಬರು ನೀರಿನಲ್ಲಿ ಕೊಚ್ಚಿಕೊಂಡು ಹೋದ ಘಟನೆ ಬೀದರ್ ತಾಲ್ಲೂಕಿನ ಬರೂರು ಸಮೀಪ ನಡೆದಿದೆ.
ಗ್ರಾಮದ ಗದ್ದಾಮಿಧಿ ಪ್ರಭಾಕರ ರೆಡ್ಡಿ (65) ನೀರಿನಲ್ಲಿ ಕೊಚ್ಚಿಕೊಂಡು ಹೋದವರು.
ಗುರುವಾರ ಗ್ರಾಮದಿಂದ ತೆಲಂಗಾಣದ ಗಂಗವಾರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿನ ಸೇತುವೆ ದಾಟುವಾಗ ಹಳ್ಳದ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ. ಶುಕ್ರವಾರ ಸಂಜೆ ವರೆಗೂ ಅವರು ಪತ್ತೆಯಾಗಿಲ್ಲ.
ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಮೀನುಗಾರರು ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ. ವ್ಯಕ್ತಿ ಪತ್ತೆ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಸೇತುವೆ ಪ್ರದೇಶದಲ್ಲಿ ಜನ ಜಮಾಯಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.