ADVERTISEMENT

ಕಾರು ಹರಿದು ವೃದ್ಧೆ ಸಾವು

​ಪ್ರಜಾವಾಣಿ ವಾರ್ತೆ
Published 16 ಮೇ 2022, 11:07 IST
Last Updated 16 ಮೇ 2022, 11:07 IST

ಚಿಟಗುಪ್ಪ: ತಾಲ್ಲೂಕಿನ ಮನ್ನಾಎಖ್ಖೆಳ್ಳಿ ಗ್ರಾಮದಲ್ಲಿ ಕಾರು ಹರಿದು ವೃದ್ಧೆ ಸುಂದ್ರಮ್ಮ ತಿಪ್ಪಣ್ಣ (72) ಸಾವನ್ನಪ್ಪಿದ್ದಾರೆ.

ಮನೆ ಎದುರಿನ ಬೇವಿನ ಮರದ ಕೆಳಗೆ ಮಲಗಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ವೃದ್ಧೆ ಮೇಲೆ ಹರಿದಿದೆ. ಗಂಭೀರವಾಗಿ ಗಾಯಗೊಂಡ ಅವರಿಗೆ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.

ಈ ಸಂಬಂಧ ಮನ್ನಾಎಖ್ಖೆಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.