ADVERTISEMENT

ಜೂನ್‍ನಲ್ಲಿ ಸರಳ ಸಾಮೂಹಿಕ ವಿವಾಹ, ಸಾಧಕರ ಸನ್ಮಾನ

​ಪ್ರಜಾವಾಣಿ ವಾರ್ತೆ
Published 24 ಮೇ 2022, 15:02 IST
Last Updated 24 ಮೇ 2022, 15:02 IST
ಮಹೇಶ ಗೋರನಾಳಕರ್
ಮಹೇಶ ಗೋರನಾಳಕರ್   

ಬೀದರ್: ಬುದ್ಧ, ಬಸವ, ಅಂಬೇಡ್ಕರ್ ಜಯಂತ್ಯುತ್ಸವ ಅಂಗವಾಗಿ ನಗರದಲ್ಲಿ ಜೂನ್ ಕೊನೆಯ ವಾರದಲ್ಲಿ ಸರಳ ಸಾಮೂಹಿಕ ವಿವಾಹ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಬೀದರ್ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಬುದ್ಧ ಬೆಳಕು ಸಾಮಾಜಿಕ, ಶೈಕ್ಷಣಿಕ ಮತ್ತು ಸಾಂಸ್ಕøತಿಕ ಟ್ರಸ್ಟ್ ಅಧ್ಯಕ್ಷ ಮಹೇಶ ಗೋರನಾಳಕರ್ ತಿಳಿಸಿದ್ದಾರೆ.


ಬುದ್ಧ ಬೆಳಕು ಸಾಮಾಜಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್, ಮಾನವ ಬಂಧುತ್ವ ವೇದಿಕೆ, ರಾಷ್ಟ್ರ ಸೇವಾ ದಳ ಹಾಗೂ ಜ್ಞಾನ ಮಾರ್ಗ ಮಲ್ಟಿಪರ್ಪೋಸ್ ಸೊಸೈಟಿ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಮದುವೆಯಾಗುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜೋಡಿಗಳಿಗೆ ಸಮಾಜ ಕಲ್ಯಾಣ ಇಲಾಖೆಯು ತಲಾ ₹. 50 ಸಾವಿರ ರೂಪಾಯಿ ಪ್ರೋತ್ಸಾಹ ಧನ ಒದಗಿಸಲಿದೆ ಎಂದು ತಿಳಿಸಿದ್ದಾರೆ.


ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮದುವೆಯಾಗ ಬಯಸುವ ವರನಿಗೆ 21 ವರ್ಷ ಹಾಗೂ ವಧುವಿಗೆ 18 ವರ್ಷ ತುಂಬಿರಬೇಕು. ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ರೇಷನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಎಸ್ಸೆಸ್ಸೆಲ್ಸಿ ಅಂಕ ಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಹಾಗೂ ಪಾಸ್‍ಪೋರ್ಟ್ ಅಳತೆಯ ಮೂರು ಫೊಟೊಗಳನ್ನು ಸಲ್ಲಿಸಬೇಕು ಎಂದು ಹೇಳಿದ್ದಾರೆ.

ADVERTISEMENT


ಎಸ್ಸೆಸ್ಸೆಲ್ಸಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ಆಧಾರ್ ಕಾರ್ಡ್ ಹಾಗೂ ಎರಡು ಪಾಸ್‍ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.


ಆಸಕ್ತರು ಜೂನ್ 25 ರ ಒಳಗೆ ಹೆಸರು ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9945153539/ 8970689375 ಗೆ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.