ಹುಮನಾಬಾದ್: ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ಬಾಂಬ್ ಸ್ಪೋಟದಂತೆ ನಿಗೂಢವಾದ ಶಬ್ದ ಕೇಳಿ ಬಂದಿದ್ದ ಹಿನ್ನೆಲೆಯಲ್ಲಿ ಬುಧವಾರ ತಹಶೀಲ್ದಾರ್ ಅಂಜುಂ ತಬಸುಮ್, ಭೂ ಮತ್ತು ಗಣಿ ಇಲಾಖೆ ಹಾಗೂ ಜೆಸ್ಕಾಂ ಇಲಾಖೆಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
‘ನಿಗೂಢವಾದ ಶಬ್ದ ಕೇಳಿ ಬಂದ ಸ್ಥಳದಲ್ಲಿ ಯಾವುದೇ ರೀತಿಯ ಕುರುಹು ಮತ್ತು ಭೂಕಂಪದ ವರದಿ ಸಹ ಬಂದಿಲ್ಲ. ಈ ಬಗ್ಗೆ ಮೇಲಧಿಕಾರಿಗಳಿಗೆ ವರದಿ ನೀಡಲಾಗಿದೆ. ಹೀಗಾಗಿ ಘಟನಾ ಸ್ಥಳದ ಸುತ್ತ ಸಿಸಿಟಿವಿ ಕ್ಯಾಮರಾ ಕ್ಯಾಮೆರಾ ಅಳವಡಿಸಲು ಸೂಚಿಸಲಾಗಿದೆ. ಗ್ರಾಮಸ್ಥರು ಆತಂಕಕ್ಕೆ ಒಳಗಾಗದೆ ಎಚ್ಚರಿಕೆಯಿಂದ’ ಇರಬೇಕು ಎಂದು ತಹಶೀಲ್ದಾರ್ ಅಂಜುಂ ತಬಸುಮ್ ತಿಳಿಸಿದರು.
ಈ ಸಂದರ್ಭದಲ್ಲಿ ಆರ್.ಐ.ರಾಹುಲ್ ಪ್ರಸಾದ್, ಪಿಡಿಒ ರಾಜಶೇಖರ ಬುಳ್ಳಾ ಸೇರಿದಂತೆ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.