ADVERTISEMENT

ಅಭಿಮಾನ್ ಸ್ಟುಡಿಯೋ | ಕಾನೂನು ಪ್ರಕಾರ ಕ್ರಮ: ಸಚಿವ ಈಶ್ವರ ಖಂಡ್ರೆ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2025, 15:47 IST
Last Updated 29 ಆಗಸ್ಟ್ 2025, 15:47 IST
   

ಬೀದರ್‌: ‘ಅಭಿಮಾನ್ ಸ್ಟುಡಿಯೋ ಮಂಜೂರು ಮಾಡುವಾಗ ಸ್ಟುಡಿಯೋ ಹೊರತಾಗಿ ಅನ್ಯ ಉದ್ದೇಶಕ್ಕೆ ಜಮೀನು ಬಳಕೆ ಮಾಡದಂತೆ ಷರತ್ತು ವಿಧಿಸಲಾಗಿತ್ತು. ಅಲ್ಲಿ 10 ಎಕರೆ ಅರಣ್ಯ ಭೂಮಿಯಿದ್ದು, ಅದನ್ನು ಮರಳಿ ಪಡೆಯಲು ಇಲಾಖೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ’ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ಭೂ ಪರಿವರ್ತನೆ ಆಗದ ಅರಣ್ಯ ಭೂಮಿಯನ್ನು ಮರಳಿ ಸರ್ಕಾರಕ್ಕೆ ಪಡೆಯುವ ತಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ. ಎಚ್ಎಂಟಿ ವಶದಲ್ಲಿರುವುದು ಅರಣ್ಯ ಭೂಮಿ ಎಂದು ತಮಗೆ ತಿಳಿದ ಕೂಡಲೇ ಕಾನೂನು ಹೋರಾಟಕ್ಕೆ ಮುಂದಾಗಿದ್ದೇನೆ. ಅದೇ ರೀತಿ ಯಾವುದು ಅರಣ್ಯ ಭೂಮಿಯೋ ಅದು ಅರಣ್ಯವಾಗಿ ಉಳಿಯತ್ತೆ ಎಂದು ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಮೇರುನಟ ದಿವಂಗತ ವಿಷ್ಣುವರ್ಧನ್ ಅವರ ಬಗ್ಗೆ ಅಪಾರ ಗೌರವ ಇದೆ. ವಿಷ್ಣುವರ್ಧನ್ ಸ್ಮಾರಕಕ್ಕೆ ಭೂಮಿ ನೀಡುವ ಬಗ್ಗೆ ಮುಖ್ಯಮಂತ್ರಿಯವರು ನಿರ್ಧಾರ ಮಾಡುತ್ತಾರೆ ಎಂದು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.