ADVERTISEMENT

ವಿವೇಕಾನಂದ ಪ್ರತಿಮೆಗೆ ಅವಮಾನ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2019, 10:43 IST
Last Updated 17 ನವೆಂಬರ್ 2019, 10:43 IST
ನವದೆಹಲಿಯ ನೆಹರೂ ವಿಶ್ವವಿದ್ಯಾಲಯದಲ್ಲಿನ ಸ್ವಾಮಿ ವಿವೇಕಾನಂದ ಮೂರ್ತಿ ವಿರೂಪಗೊಳಿಸಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬೀದರ್‌ನಲ್ಲಿ ಶನಿವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು
ನವದೆಹಲಿಯ ನೆಹರೂ ವಿಶ್ವವಿದ್ಯಾಲಯದಲ್ಲಿನ ಸ್ವಾಮಿ ವಿವೇಕಾನಂದ ಮೂರ್ತಿ ವಿರೂಪಗೊಳಿಸಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬೀದರ್‌ನಲ್ಲಿ ಶನಿವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು   

ಬೀದರ್: ನವದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದ ಪ್ರತಿಮೆ ವಿರೂಪಗೊಳಿಸಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.

ಸರಸ್ವತಿ ಪದವಿಪೂರ್ವ ಕಾಲೇಜಿನಿಂದ ಅಂಬೇಡ್ಕರ್ ವೃತ್ತ, ಭಗತ್‌ಸಿಂಗ್ ವೃತ್ತ, ಮಹಾವೀರ ವೃತ್ತ, ತಹಶೀಲ್ದಾರ್ ಕಚೇರಿ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮನವಿಪತ್ರ ಸಲ್ಲಿಸಿದರು.

ಕಿಡಿಗೇಡಿಗಳು ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ ಆವರಣದಲ್ಲಿನ ಪ್ರತಿಮೆ ವಿರೂಪಗೊಳಿಸಿ ಸ್ವಾಮಿ ವಿವೇಕಾನಂದರಿಗೆ ಅವಮಾನ ಮಾಡಿದ್ದಾರೆ. ಸಮಾಜದಲ್ಲಿ ಶಾಂತಿಗೆ ಭಂಗ ಉಂಟು ಮಾಡುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದರು.

ADVERTISEMENT

ಕೂಡಲೇ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಪರಿಷತ್ ರಾಜ್ಯ ಸಹ ಕಾರ್ಯದರ್ಶಿ ರೇವಣಸಿದ್ದ ಜಾಡರ, ನಗರ ಕಾರ್ಯದರ್ಶಿ ವಿಕಾಸ ಚೋರಮಲ್ಲೆ, ಸಂಚಾಲಕ ನಿಖಿಲ್ ಹಿಂಗೆ, ಅರವಿಂದ ಸುಂದಾಳಕರ್, ಅಮರ ಸುಲ್ತಾನಪೂರೆ, ಮಾಣಿಕರಾವ್ ಪಾಟೀಲ, ವೀರೇಶ ಜಾಡರ್ ರೇಕುಳಗಿ, ಮಮತಾ ಭಂಡಾರೆ, ಸಂಜನಾ, ಸೀಮಾ ಬೇಗಂ, ಅಮ್ರಿನ್, ಅಂಬಿಕಾ, ರುಹಾನ್, ಆರತಿ, ರೋಜಮೇರಿ, ನಜ್ಮಾ, ಸ್ವಾತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.