ADVERTISEMENT

ಉಚಿತ ಬಸ್‌ಪಾಸ್‌ಗಾಗಿ ಎಬಿವಿಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 3 ಜೂನ್ 2019, 15:34 IST
Last Updated 3 ಜೂನ್ 2019, 15:34 IST
ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್‌ ಪಾಸ್ ವಿತರಿಸಬೇಕು ಎಂದು ಒತ್ತಾಯಿಸಿ ಬೀದರ್‌ನ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ವಿಭಾಗೀಯ ನಿಯಂತ್ರಣಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು
ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್‌ ಪಾಸ್ ವಿತರಿಸಬೇಕು ಎಂದು ಒತ್ತಾಯಿಸಿ ಬೀದರ್‌ನ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ವಿಭಾಗೀಯ ನಿಯಂತ್ರಣಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು   

ಬೀದರ್: ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್‌ ಪಾಸ್‌ ವಿತರಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಸ್ಥಳಕ್ಕೆ ಭೇಟಿ ನೀಡಿದ ವಿಭಾಗೀಯ ನಿಯಂತ್ರಣಾಧಿಕಾರಿಗೆ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರ ಸಲ್ಲಿಸಿದರು.

ಮೇ 22 ರಿಂದಲೇ ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಿವೆ. ಆದರೆ, ಬಸ್‌ ಪಾಸ್‌ ವಿತರಿಸದ ಕಾರಣ ವಿದ್ಯಾರ್ಥಿಗಳಿಗೆ ತರಗತಿಗೆ ಹಾಜರಾಗಲು ಅನಾನುಕೂಲವಾಗುತ್ತಿದೆ ಎಂದು ದೂರಿದರು.

ADVERTISEMENT

ವಿದ್ಯಾರ್ಥಿಗಳಿಗೆ ವರ್ಷದ ಎಲ್ಲ 12 ತಿಂಗಳ ಬಸ್‌ ಪಾಸ್ ಕೊಡಬೇಕು. ಬಸ್‌ ಪಾಸ್‌ ಹೊಂದಿದವರಿಗೆ ನಗರ ಸಾರಿಗೆ ಬಸ್‌ಗಳಲ್ಲೂ ಸಂಚರಿಸಲು ಅವಕಾಶ ಕೊಡಬೇಕು ಎಂದು ಆಗ್ರಹಿಸಿದರು.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಘಟಕದ ಸಹ ಕಾರ್ಯದರ್ಶಿ ರೇವಣಸಿದ್ದ ಜಾಡರ್, ಜಿಲ್ಲಾ ಘಟಕದ ಸಂಘಟನಾ ಕಾರ್ಯದರ್ಶಿ ಧನಂಜಯ ಚಿತ್ರದುರ್ಗ, ನಗರ ಘಟಕದ ಉಪಾಧ್ಯಕ್ಷ ಚನ್ನಬಸವ ಬಿರಾದಾರ, ಅಶೋಕ ಶೆಂಬೆಳ್ಳಿ, ಅರವಿಂದ ಸುಂದಾಳಕರ್, ಸಚಿನ ಗುನ್ನಾಳೆ, ಉಮೇಶ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.