ADVERTISEMENT

ಹುಮನಾಬಾದ್ ಬಳಿ ಅಪಘಾತ: ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2026, 7:30 IST
Last Updated 13 ಫೆಬ್ರುವರಿ 2026, 7:30 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಹುಮನಾಬಾದ್: ಪಟ್ಟಣದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿನ ಕಲಬುರಗಿ–ಬೀದರ್ ರಸ್ತೆಯಲ್ಲಿ ವಾಹನವೊಂದು ಡಿಕ್ಕಿ ಹೊಡೆದು ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.

ADVERTISEMENT

ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಅಪರಿಚಿತ ವಾಹನವು ಡಿಕ್ಕಿ ಹೊಡೆದು ಹೋಗಿದ್ದು, ಶವವನ್ನು ಹುಮನಾಬಾದ್ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ಪರಿಚಿತರು ಮಾಹಿತಿ ದೊರೆತರೆ ಗುರುತಿಸಬೇಕು ಎಂದು ಹುಮನಾಬಾದ್ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಹುಲೇಪ್ಪ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.