ADVERTISEMENT

ಬ್ರಿಮ್ಸ್ ವ್ಯವಸ್ಥೆ ಸುಧಾರಿಸದಿದ್ದರೆ ಕ್ರಮ

ಜಿಲ್ಲಾಧಿಕಾರಿ ಎಚ್‌.ಆರ್‌.ಮಹಾದೇವ ಮಾಹಿತಿ

​ಪ್ರಜಾವಾಣಿ ವಾರ್ತೆ
Published 6 ಮೇ 2020, 17:13 IST
Last Updated 6 ಮೇ 2020, 17:13 IST

ಬೀದರ್: ಸಾರ್ವಜನಿಕರಿಂದ ದೂರು ಬರದಂತೆ ನಗರದ ಬ್ರಿಮ್ಸ್ ಆಸ್ಪತ್ರೆ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ ಹೇಳಿದರು.

ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಬ್ರಿಮ್ಸ್ ಆಸ್ಪತ್ರೆ ಕುರಿತು ಏನಾದರೂ ದೂರುಗಳು, ಕುಂದುಕೊರತೆಯ ವರದಿಗಳು ಪ್ರಕಟವಾದ ಕೂಡಲೇ ಸ್ಪಷ್ಟೀಕರಣ ನೀಡಬೇಕು ಎಂದು ತಿಳಿಸಿದರು.

ADVERTISEMENT

ಕೆಲವೇ ವೈದ್ಯರು ಮತ್ತು ಸಿಬ್ಬಂದಿ ಮಾಡುವ ತಪ್ಪುಗಳಿಂದ ಇಡೀ ಆಸ್ಪತ್ರೆಗೆ ಮತ್ತು ಜಿಲ್ಲೆಗೆ ಕೆಟ್ಟ ಹೆಸರು ಬರುತ್ತದೆ. ಇದು ಕೊನೆಯಾಗಬೇಕು. ತಪ್ಪು ಮಾಡಿದವರಿಗೆ ಕಾರಣ ಕೇಳಿ ನೋಟಿಸ್ ನೀಡಿ, ವಿವರಣೆ ಪಡೆದು, ತಪ್ಪಿತಸ್ಥರು ಎಂದು ಕಂಡು ಬಂದಲ್ಲಿ ಯಾವುದೇ ಮುಲಾಜಿಲ್ಲದೇ ಶಿಸ್ತು ಕ್ರಮ ಜರುಗಿಸಬೇಕು ಎಂದು ಸೂಚಿಸಿದರು.

ವೈದ್ಯರು ಮತ್ತು ಸಿಬ್ಬಂದಿ ಏನೇ ಬೇಡಿಕೆ ಸಲ್ಲಿಸಿದರೂ ಸ್ಪಂದಿಸಬೇಕು. ಯಾವುದೇ ವೈದ್ಯರು ಮತ್ತು ಸಿಬ್ಬಂದಿಗೆ ಅನ್ಯಾಯವಾಗದ ಹಾಗೆ ನೋಡಿಕೊಳ್ಳಬೇಕು. ಅನಾವಶ್ಯಕ ಕಿರಿಕಿರಿ ಉಂಟು ಮಾಡುವ ವೈದ್ಯರು ಮತ್ತು ಸಿಬ್ಬಂದಿಯ ಮೇಲೆ ಕ್ರಮ ಜರುಗಿಸಲು ಹಿಂಜರಿಯಬಾರದು ಎಂದು ಬ್ರಿಮ್ಸ್ ನಿರ್ದೇಶಕರಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವಿ.ಜಿ.ರೆಡ್ಡಿ, ಬ್ರಿಮ್ಸ್ ನಿರ್ದೇಶ ಡಾ.ಶಿವಕುಮಾರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರತಿಕಾಂತ ಸ್ವಾಮಿ ಹಾಗೂ ವೈದ್ಯಕೀಯ ಅಧೀಕ್ಷಕ ವಿಜಯಕುಮಾರ ಅಂತಪ್ಪನವರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.