ADVERTISEMENT

ಬೀದರ್ | ಕನ್ನಡ ಅಭಿವೃದ್ಧಿಗೆ ಯೋಜನೆ: ಸಂವಾದದಲ್ಲಿ ಕಸಾಪ ಜಿಲ್ಲಾ ಅಧ್ಯಕ್ಷ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2021, 14:06 IST
Last Updated 25 ನವೆಂಬರ್ 2021, 14:06 IST
ಬೀದರ್‌ನ ನೂಪುರ ನೃತ್ಯ ಅಕಾಡೆಮಿಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ನೂತನ ಅಧ್ಯಕ್ಷ ಸುರೇಶ ಚನಶೆಟ್ಟಿ ಅವರನ್ನು ಸನ್ಮಾನಿಸಲಾಯಿತು
ಬೀದರ್‌ನ ನೂಪುರ ನೃತ್ಯ ಅಕಾಡೆಮಿಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ನೂತನ ಅಧ್ಯಕ್ಷ ಸುರೇಶ ಚನಶೆಟ್ಟಿ ಅವರನ್ನು ಸನ್ಮಾನಿಸಲಾಯಿತು   

ಬೀದರ್: ಮುಂದಿನ ಐದು ವರ್ಷಗಳಲ್ಲಿ ಜಿಲ್ಲೆಯಲ್ಲಿ ಕನ್ನಡ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ನೂತನ ಅಧ್ಯಕ್ಷ ಸುರೇಶ ಚನಶೆಟ್ಟಿ ತಿಳಿಸಿದರು.

ನಗರದ ನೂಪುರ ನೃತ್ಯ ಅಕಾಡೆಮಿಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕನ್ನಡ ಕಟ್ಟುವ ಕೆಲಸ ಮಾಡಲಾಗುವುದು ಎಂದು ಹೇಳಿದರು.

ADVERTISEMENT

ಕನ್ನಡ ಒಂದು ಭಾಷೆಯಷ್ಟೇ ಅಲ್ಲ; ಜೀವನ ವಿಧಾನವೂ ಹೌದು. ಕನ್ನಡಿಗರು ಅನ್ಯ ಭಾಷೆಗಳನ್ನು ಗೌರವಿಸುವ, ಕಲಿಯುವ ಉದಾರ ಗುಣ ಹೊಂದಿದ್ದಾರೆ. ತಾಳ್ಮೆ, ಸಹಿಷ್ಣುತೆ, ಭ್ರಾತೃತ್ವ, ಭಾವೈಕ್ಯ ಕನ್ನಡಿಗರ ಅಸ್ಮಿತೆಗಳಾಗಿವೆ ಎಂದು ತಿಳಿಸಿದರು.

ಕನ್ನಡ ಪರ ಸಂಘ ಸಂಸ್ಥೆಗಳು ಕನ್ನಡಿಗರಲ್ಲಿ ಮಾತೃ ಭಾಷೆ ಪ್ರೇಮ ಬೆಳೆಸುವ ದಿಸೆಯಲ್ಲಿ ಕೆಲಸ ಮಾಡಬೇಕಿದೆ. ಕನ್ನಡದ ಬೆಳವಣಿಗೆಗೆ ಎಲ್ಲರೂ ಕನ್ನಡ ಪತ್ರಿಕೆಗಳನ್ನು ಓದಬೇಕು. ಪ್ರತಿ ಮನೆಗಳಲ್ಲೂ ಕನ್ನಡ ಪುಸ್ತಕಗಳ ಗ್ರಂಥಾಲಯ ಇರಬೇಕು ಎಂದರು.

ನೂಪುರ ನೃತ್ಯ ಅಕಾಡೆಮಿಯ ಉಷಾ ಪ್ರಭಾಕರ ಮಾತನಾಡಿ, ಅಕಾಡೆಮಿಯಲ್ಲಿ ನೃತ್ಯದೊಂದಿಗೆ ಮಕ್ಕಳಿಗೆ ಕನ್ನಡವನ್ನೂ ಕಲಿಸಲಾಗುತ್ತಿದೆ. ಕನ್ನಡ ನಾಡು, ನುಡಿಯ ಬಗ್ಗೆ ಅಭಿಮಾನ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ಪ್ರಮುಖರಾದ ಪ್ರಭಾಕರ, ಉಮೇಶ ನಾಯಕ್, ಸತೀಶ್ ಕೋಟ್ಯಾನ, ಬಸವರಾಜ ಬಲ್ಲೂರ, ಶಿವಲಿಂಗ ಹೇಡೆ, ವೀರಣ್ಣ ಬ್ಯಾಗೋಟಿ, ಬಾಬುರಾವ್ ದಾನಿ, ಯೋಗೀಶ ಮಠದ, ಪ್ರಫುಲ್ಲಾ ಪ್ರಭು ಇದ್ದರು.

ಆಳ್ವಾಸ ನುಡಿಸಿರಿ ಘಟಕದ ಕಾರ್ಯದರ್ಶಿ ಸುಬ್ರಹ್ಮಣ್ಯ ಪ್ರಭು ಸ್ವಾಗತಿಸಿದರು. ರಘುರಾಮ ಯು. ನಿರೂಪಿಸಿದರು. ಬಸವರಾಜ ರುದನೂರ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.