ADVERTISEMENT

ಸರ್ಕಾರಿ ವೈದ್ಯಕೀಯ ಕಾಲೇಜುಗಳ ಆಸ್ಪತ್ರೆಗೆ ಆಡಳಿತಾಧಿಕಾರಿ ನೇಮಕ

ವೈದ್ಯಕೀಯ ಶಿಕ್ಷಣ ಸಚಿವ ಇ.ತುಕಾರಾಂ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2019, 13:56 IST
Last Updated 19 ಜೂನ್ 2019, 13:56 IST
ಇ. ತುಕಾರಾಂ
ಇ. ತುಕಾರಾಂ   

ಬೀದರ್: ‘ಆಡಳಿತ ವೈಫಲ್ಯದಿಂದಾಗಿಯೇ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಆಸ್ಪತ್ರೆಗಳಲ್ಲಿ ಅವ್ಯವಸ್ಥೆ ಮುಂದುವರಿದಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಇಂತಹಆಸ್ಪತ್ರೆಗಳಿಗೆ ಕೆಎಎಸ್ ಶ್ರೇಣಿಯವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಲಾಗುವುದು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಇ.ತುಕಾರಾಂ ತಿಳಿಸಿದರು.

‘ಬೋಧಕ ಆಸ್ಪತ್ರೆಗಳಿಗೆ ಹಣಕಾಸು ಸಲಹೆಗಾರರನ್ನೂ ನೇಮಿಸಲಾಗುವುದು’ ಎಂದು ಬುಧವಾರ ಇಲ್ಲಿ ಬೀದರ್‌ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಗವರ್ನಿಂಗ್‌ ಕೌನ್ಸಿಲ್‌ ಸಭೆಯ ನಂತರ ತಿಳಿಸಿದರು.

‘ಇಲ್ಲಿಯ ಆಸ್ಪತ್ರೆಯಲ್ಲಿ ಸೌಲಭ್ಯಗಳ ಕೊರತೆ ಇರುವ ಕಾರಣ ಭಾರತೀಯ ವೈದ್ಯಕೀಯ ಮಂಡಳಿ(ಎಂಸಿಐ)ಯು ಎಂಬಿಬಿಎಸ್‌ನ 50 ಸೀಟುಗಳನ್ನು ಕಡಿತಗೊಳಿಸಲಿದೆ ಎಂಬ ಆತಂಕ ಬೇಡ. ಬೀದರ್‌ ಹಾಗೂ ಕಾರವಾರದ ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ಎಂಸಿಐ ನಿಯಮಾವಳಿ ಪ್ರಕಾರ ಸಕಲ ಸೌಲಭ್ಯ ಕಲ್ಪಿಸಿ ಅನುಮತಿ ಪಡೆದುಕೊಳ್ಳಲಾಗುವುದು’ ಎಂದು ಹೇಳಿದರು.

ADVERTISEMENT

‘ಆಸ್ಪತ್ರೆಯಲ್ಲಿ ಹಿರಿಯ ವೈದ್ಯರು ರೋಗಿಗಳಿಗೆ ಚಿಕಿತ್ಸೆ ಕೊಡುತ್ತಿಲ್ಲ ಎನ್ನುವ ದೂರುಗಳು ಇವೆ. ಸಿಸಿಟಿವಿ ಕ್ಯಾಮೆರಾ ಮೂಲಕ ಅವರ ಮೇಲೆ ನಿಗಾ ಇಡುವ ಕುರಿತು ಪರಿಶೀಲಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.