ADVERTISEMENT

ಖಟಕಚಿಂಚೋಳಿ: ವಿಶ್ವವಿದ್ಯಾಲಯದ ಆರಂಭದಿಂದ ಅನುಕೂಲ

ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನೂತನ ವಿವಿ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2023, 5:32 IST
Last Updated 29 ಮಾರ್ಚ್ 2023, 5:32 IST
ಖಟಕಚಿಂಚೋಳಿ ಸಮೀಪದ ಹಾಲಹಳ್ಳಿಯ ನೂತನ ವಿಶ್ವವಿದ್ಯಾಲಯದ ಉದ್ಘಾಟನಾ ಸಮಾರಂಭದಲ್ಲಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ ಮಾತನಾಡಿದರು
ಖಟಕಚಿಂಚೋಳಿ ಸಮೀಪದ ಹಾಲಹಳ್ಳಿಯ ನೂತನ ವಿಶ್ವವಿದ್ಯಾಲಯದ ಉದ್ಘಾಟನಾ ಸಮಾರಂಭದಲ್ಲಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ ಮಾತನಾಡಿದರು   

ಖಟಕಚಿಂಚೋಳಿ: ಸಮೀಪದ ಹಾಲಹಳ್ಳಿಯ ಸ್ನಾತಕೋತ್ತರ ಅಧ್ಯ ಯನ ಕೇಂದ್ರದಲ್ಲಿ ಮಂಗಳವಾರ ವರ್ಚುವಲ್ ವೇದಿಕೆ ಮೂಲಕ ನೂತನ ವಿಶ್ವವಿದ್ಯಾಲಯ ಉದ್ಘಾಟಿಸಲಾಯಿತು.

ನಂತರ ಮಾತನಾಡಿದ ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ದಯಾನಂದ ಅಗಸರ ಮಾತನಾಡಿ,‘ಬೀದರ್ ಜಿಲ್ಲೆಯಲ್ಲಿ ನೂತನ ವಿಶ್ವವಿದ್ಯಾಲಯ ಆರಂಭ ಆಗಿರುವುದರಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ’ ಎಂದು ಹೇಳಿದರು

ಗುಲಬ ರ್ಗಾ ವಿಶ್ವವಿದ್ಯಾಲಯದಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು’ ಎಂದು ತಿಳಿಸಿದರು.

ADVERTISEMENT

‘ಈ ವಿಶ್ವವಿದ್ಯಾಲಯದಲ್ಲಿ 13 ವಿವಿಧ ಸ್ನಾತಕೋತ್ತರ ವಿಭಾಗಗಳಿವೆ. ಈಗಾಗಲೇ 2022-23ನೇ ಸಾಲಿನ ಶೈಕ್ಷಣಿಕ ಕಾರ್ಯ ಚಟುವಟಿಕೆಗಳು ಪ್ರಾರಂಭಗೊಂಡಿವೆ. 320 ಎಕರೆ ಭೂಮಿ ಹೊಂದಿರುವ ವಿಶ್ವವಿದ್ಯಾಲಯ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾಗಿದೆ’ ಎಂದು ಅವರು ತಿಳಿಸಿದರು.

ಬೀದರ್ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ ಮಾತನಾಡಿ,‘ವಿಶ್ವವಿದ್ಯಾಲಯದ ಅಭಿವೃ ದ್ಧಿಗೆ ಹಗಲಿರುಳು ಶ್ರಮಿಸ ಲಾಗುವುದು’ ಎಂದು ಅವರು ಹೇಳಿದರು.

ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಪ್ರತಿಮಾ ಚಾಮಾ ಹಾಗೂ ಅಕಾಡೆಮಿಕ ಕೌನ್ಸಿಲ್ ಸದಸ್ಯ ಬಸವರಾಜ ಪವಾರ್, ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವ ಬಿ.ಶರಣಪ್ಪ, ಬ್ಯಾಲಹಳ್ಳಿ (ಕೆ) ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪವಿತ್ರಾ ಶಿವಕುಮಾರ ಸದಾಶಿವ, ಪ್ರೊ.ಶಿವಾನಂದ ಹಾಗೂ ಪ್ರೊ.ರವೀಂದ್ರನಾಥ ಗಬಾಡಿ ಸೇರಿದಂತೆ ಹಲವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.