ADVERTISEMENT

ಲಿಂಗರಾಜ ಅಪ್ಪ ಕಾಲೇಜಿನಲ್ಲಿ ಎಂಜಿನಿಯರ್‌ಗಳ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2021, 15:47 IST
Last Updated 18 ಸೆಪ್ಟೆಂಬರ್ 2021, 15:47 IST
ಬೀದರ್ ತಾಲ್ಲೂಕಿನ ಗೋರನಳ್ಳಿಯ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಎಂಜಿನಿಯರ್‌ಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಕಲಬುರ್ಗಿಯ ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಅವರು ಸಾಧಕ ವಿದ್ಯಾರ್ಥಿನಿಯನ್ನು ಸನ್ಮಾನಿಸಿ ಸ್ಮರಣಿಕೆ ನೀಡಿದರು
ಬೀದರ್ ತಾಲ್ಲೂಕಿನ ಗೋರನಳ್ಳಿಯ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಎಂಜಿನಿಯರ್‌ಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಕಲಬುರ್ಗಿಯ ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಅವರು ಸಾಧಕ ವಿದ್ಯಾರ್ಥಿನಿಯನ್ನು ಸನ್ಮಾನಿಸಿ ಸ್ಮರಣಿಕೆ ನೀಡಿದರು   

ಬೀದರ್: ವಿದ್ಯಾರ್ಥಿಗಳು ಕೌಶಲಕ್ಕೆ ಪ್ರಾಮುಖ್ಯತೆ ಕೊಡಬೇಕು ಎಂದು ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಸಲಹೆ ಮಾಡಿದರು.

ಬೀದರ್ ತಾಲ್ಲೂಕಿನ ಗೋರನಳ್ಳಿಯ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ನಿಮಿತ್ತ ನಡೆದ ಎಂಜಿನಿಯರ್‌ಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿಯೇ ಸಂಘದಡಿ ವಿವಿಧ ಶಾಲಾ ಕಾಲೇಜುಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.

ADVERTISEMENT

ಅಧ್ಯಕ್ಷತೆ ವಹಿಸಿದ್ದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು ನಿರ್ದೇಶಕ ಶರಣಬಸಪ್ಪ ದೇಶಮುಖ ಮಾತನಾಡಿ,
ಕಾಲೇಜಿನ ಅನೇಕ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ರ್‍ಯಾಂಕ್ ಗಳಿಸಿ ಸಾಧನೆ ಮಾಡಿದ್ದಾರೆ ಎಂದು ಹೇಳಿದರು.

ಗುಣಮಟ್ಟದ ಶಿಕ್ಷಣದ ಕಾರಣ ಪ್ರತಿಷ್ಠಿತ ಕಂಪನಿಗಳು ಕ್ಯಾಂಪಸ್ ಸಂದರ್ಶನ ನಡೆಸಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶ ಕಲ್ಪಿಸುತ್ತಿವೆ ಎಂದು ನುಡಿದರು.

ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ ಮಾತನಾಡಿ, ದೇಶದ ಅಭಿವೃದ್ಧಿಯಲ್ಲಿ ಎಂಜಿನಿಯರ್‌ಗಳ ಪಾತ್ರ ಬಹುಮುಖ್ಯವಾಗಿದೆ ಎಂದು ಹೇಳಿದರು.

ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಅಭಯಕುಮಾರ ಮಾತನಾಡಿದರು. ವಿವಿಧ ಕಂಪನಿಗಳಿಗೆ ಆಯ್ಕೆಯಾದ ಹಾಗೂ 2021ನೇ ಸಾಲಿನ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಡಾ. ಉಮಾ ದೇಶಮುಖ, ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ಎಂಬಿಎ ವಿಭಾಗದ ಮುಖ್ಯಸ್ಥ ಭದ್ರಪ್ಪ ಹರಳಯ್ಯ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯ ವರದಿ ವಾಚಿಸಿದರು. ಪ್ರಾಚಾರ್ಯೆ ಡಾ. ವಿನಿತಾ ಪಾಟೀಲ ಸ್ವಾಗತಿಸಿದರು. ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ವಿಜಯಾನಂದ ಕೆ. ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.