ADVERTISEMENT

ಮಹಿಳಾ ದಿನಾಚರಣೆ: ಸ್ವಾಭಿಮಾನಿ ಬದುಕು ಸಾಗಿಸಲು ಸಲಹೆ

ಕರ್ನಾಟಕ ಲೇಖಕಿಯರ ಸಂಘ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2021, 14:14 IST
Last Updated 11 ಮಾರ್ಚ್ 2021, 14:14 IST
ಬೀದರ್‌ನಲ್ಲಿ ಕರ್ನಾಟಕ ಲೇಖಕಿಯರ ಸಂಘದ ವತಿಯಿಂದ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರನ್ನು ಸನ್ಮಾನಿಸಲಾಯಿತು
ಬೀದರ್‌ನಲ್ಲಿ ಕರ್ನಾಟಕ ಲೇಖಕಿಯರ ಸಂಘದ ವತಿಯಿಂದ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರನ್ನು ಸನ್ಮಾನಿಸಲಾಯಿತು   

ಬೀದರ್: ಆಧುನಿಕ ಯುಗದಲ್ಲಿ ಮಹಿಳೆಯರು ಸ್ವಾವಲಂಬಿಗಳಾಗಬೇಕು. ಸ್ವಾಭಿಮಾನಿ ಬದುಕು ಸಾಗಿಸಬೇಕು ಎಂದು ಸಿದ್ಧಾರೂಢ ಮಠದ ಮಾತೆ ಅಮೃತಾನಂದಮಯಿ ಹೇಳಿದರು.

ಕರ್ನಾಟಕ ಲೇಖಕಿಯರ ಸಂಘದ ವತಿಯಿಂದ ನಗರದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹೆಣ್ಣುಮಕ್ಕಳು ಶಿಕ್ಷಣಕ್ಕೆ ಒತ್ತು ಕೊಡಬೇಕು ಎಂದರು.

ಲೇಖಕಿಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಕಸ್ತೂರಿ ಪಟಪಳ್ಳಿ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕಿ ಸುನಿತಾ ಕೂಡ್ಲಿಕರ್, ಸಾಹಿತಿಗಳಾದ ಸಾಧನಾ ರಂಜೋಳಕರ್, ಜಗದೇವಿ ಟಿ, ಸಬಿಹಾ ಖಾನ್ ಇದ್ದರು. ಗಾಯಕಿ ರೇಖಾ ಅಪ್ಪಾರಾವ್ ಸೌದಿ, ಶಾಂತಾದೇವಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರನ್ನು ಸನ್ಮಾನಿಸಲಾಯಿತು.

ADVERTISEMENT

ರಾಜಮ್ಮ ಚಿಕ್ಕಪೇಟ ಸ್ವಾಗತಿಸಿದರು. ಪಾರ್ವತಿ ಸೋನಾರೆ ನಿರೂಪಿಸಿದರು. ವೇದಾವತಿ ಮಠಪತಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.