ADVERTISEMENT

ಬಸವಕಲ್ಯಾಣ ಉಪ ಚುನಾವಣೆ: ಕಾಂಗ್ರೆಸ್ ವೀಕ್ಷಕರಾಗಿ ಅಜಮತ್ ಪಟೇಲ್ ನೇಮಕ

ಬಸವಕಲ್ಯಾಣ ಉಪ ಚುನಾವಣೆ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2021, 16:34 IST
Last Updated 4 ಏಪ್ರಿಲ್ 2021, 16:34 IST
ಅಜಮತ್ ಪಟೇಲ್
ಅಜಮತ್ ಪಟೇಲ್   

ಬೀದರ್: ಬಸವಕಲ್ಯಾಣ ವಿಧಾನಸಭಾ ಉಪ ಚುನಾವಣೆಗೆ ಎಐಸಿಸಿ ಅಲ್ಪಸಂಖ್ಯಾತರ ವಿಭಾಗವು ಜಿಲ್ಲೆಯವರೇ ಆದ ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ಸಂಯೋಜಕ ಅಜಮತ್ ಪಟೇಲ್ ಅವರನ್ನು ವೀಕ್ಷಕರನ್ನಾಗಿ ನೇಮಕ ಮಾಡಿದೆ.

ಎಐಸಿಸಿ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ನದೀಮ್ ಜಾವೇದ್ ವೀಕ್ಷಕರ ನೇಮಕಕ್ಕೆ ಅನುಮೋದನೆ ನೀಡಿದ್ದಾರೆ ಎಂದು ವಿಭಾಗದ ರಾಜ್ಯ ಉಸ್ತುವಾರಿ ಜಫರ್ ಅಹಮದ್ ಖಾನ್ ಅವರು ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ವೈ. ಸಯೀದ್ ಅಹಮದ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಅಜಮತ್ ಪಟೇಲ್ 22 ವರ್ಷಗಳಿಂದ ಕಾಂಗ್ರೆಸ್‍ನಲ್ಲಿದ್ದಾರೆ. ಎನ್‍ಎಸ್‍ಯುಐ ಜಿಲ್ಲಾ ಘಟಕದ ಅಧ್ಯಕ್ಷ, ಕಾಂಗ್ರೆಸ್ ಜಿಲ್ಲಾ ಯುವ ಘಟಕದ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಘಟಕದ ಕಾರ್ಯದರ್ಶಿ, ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಸಂಚಾಲಕ ಸೇರಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಚಿಂಚೋಳಿ ವಿಧಾನಸಭಾ ಚುನಾವಣೆಯಲ್ಲಿ ವೀಕ್ಷಕರಾಗಿ ಕೆಲಸ ಮಾಡಿದ ಅನುಭವವನ್ನೂ ಹೊಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.