ಬೀದರ್ ಮೋಟಾರ್ ವಾಹನ ತರಬೇತಿ ಶಾಲೆಯ ಸಂಘದವರು ಬೀದರ್‌ನಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಮನವಿ ಪತ್ರ ಸಲ್ಲಿಸಿದರು
ಬೀದರ್: ನಗರದ ಆರ್‌ಟಿಒ ಕಚೇರಿಯ ಸಿಬ್ಬಂದಿ ಮೋಟಾರ್ ವಾಹನ ತರಬೇತಿ ಶಾಲೆಯವರೊಂದಿಗೆ ದುರ್ವರ್ತನೆ ತೋರುತ್ತಿದ್ದಾರೆ ಎಂದು ಬೀದರ್ ಮೋಟಾರ ವಾಹನ ತರಬೇತಿ ಶಾಲೆಯ ಸಂಘ ಆರೋಪಿಸಿದೆ.
ಈ ಸಂಬಂಧ ಸಂಘದ ಪದಾಧಿಕಾರಿಗಳು ನಗರದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮೂಲಕ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಿದರು.
ಮೋಟಾರ್ ವಾಹನ ತರಬೇತಿ ಶಾಲೆಯ ಸಂಘದವರು ತಮ್ಮ ಕಡತಗಳನ್ನು ಆರ್‌ಟಿಒ ಕಚೇರಿಗೆ ತೆಗೆದುಕೊಂಡು ಹೋದರೆ ಅವುಗಳನ್ನು ನೋಡಲು ನಿರಾಕರಿಸಿ ಅವಾಚ್ಯ ಪದಗಳಿಂದ ನಿಂದಿಸುತ್ತಿದ್ದಾರೆ. ಮೂರನೇ ವ್ಯಕ್ತಿಗಳ ಮೂಲಕ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ಇಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಸಂಘದ ಜಿಲ್ಲಾ ಅಧ್ಯಕ್ಷ ಪ್ರಕಾಶ ಗುಮ್ಮೆ, ಕಾರ್ಯದರ್ಶಿ ರಾಜಕುಮಾರ ಬಿರಾದಾರ, ರಾಜ್ಯ ಸಂಘಟನೆ ಕಾರ್ಯದರ್ಶಿ ಶಿವರಾಜ ಜಮಾದಾರ. ಸುಧಾಕರ್ ಬಿರಾದಾರ, ಎಂ.ಡಿ. ಮಕ್ಸೂದ್ ಅಲಿ, ಹರೀಶ, ಅಭಿಷೇಕ್ ಹೊನ್ನಾ ಮತ್ತಿತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.