ಹುಮನಾಬಾದ್: ತಾಲ್ಲೂಕಿನ ಚಂದನ್ನಳ್ಳಿ ಗ್ರಾಮ ಪಂಚಾಯಿತಿಯಲ್ಲಿ 15ನೇ ಹಣಕಾಸಿನ ಯೋಜನೆ ಅಡಿಯಲ್ಲಿ ಸುಮಾರು ₹19 ಲಕ್ಷ ಅವ್ಯವಹಾರ ನಡೆದಿದೆ ಎಂದು ಸಾಮಾಜಿಕ ಕಾರ್ಯಕರ್ತ ರಾಹುಲ್ ದೋಣಿ ಆರೋಪಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಿಡಿಒ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಸೇರಿಕೊಂಡು ಅವ್ಯವಹಾರ ಮಾಡಿದ್ದಾರೆ. ಅವ್ಯವಹಾರದ ಬಗ್ಗೆ ಈಚೆಗೆ ಜಿಲ್ಲಾ ಪಂಚಾಯಿತಿ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನೆ ಆಗಿಲ್ಲ’ ಎಂದರು.
‘ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಪಿಡಿಒ ಅವರು ಸರ್ಕಾರದ ಲಕ್ಷಾಂತರ ರೂಪಾಯಿ ಕೊಳ್ಳೆ ಹೊಡೆಯುತ್ತಿದ್ದಾರೆ. ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.