ಔರಾದ್: ‘ಪೌರಾಡಳಿತ ನಿರ್ದೇಶನಾಲಯದ ಆದೇಶದಂತೆ ತಂತ್ರಾಂಶ ಸರಳೀಕರಣಗೊಳಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಆಸ್ತಿ ಕಣಜ ತಂತ್ರಾಂಶದಲ್ಲಿ ಗಣಕೀಕರಣಗೊಂಡ ಆಸ್ತಿಗಳ ವಿವರಗಳನ್ನು ಪರಿಶೀಲನೆಗೆ ಒಳಪಡಿಸಬೇಕಾಗಿದೆ’ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷರು ಹಾಗೂ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಇ-ಆಸ್ತಿ ತಂತ್ರಾಂಶದಲ್ಲಿ ಸ್ವತ್ತುಗಳಿಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳು, ಸ್ವತ್ತಿನ ಮಾಲೀಕತ್ವ ದೃಢೀಕರಿಸುವ ಪತ್ರ, ಸ್ವತ್ತಿನ ಭಾವಚಿತ್ರ, ಮಾಲೀಕರ ಭಾವಚಿತ್ರ, ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಕಂದಾಯ ಪಾವತಿಸಿದ ರಸೀದಿ, ವಿದ್ಯುತ್ ಪಾವತಿ, ನೀರಿನ ಕರ ಪಾವತಿ ರಸೀದಿಯನ್ನು ಫೆಬ್ರುವರಿ 25ರೊಳಗೆ ಪಟ್ಟಣ ಪಂಚಾಯಿತಿಗೆ ಕಚೇರಿಗೆ ಸಲ್ಲಿಸಬೇಕು. ಈಗಾಗಲೇ ಗಣಕೀಕರಣಗೊಂಡ ಆಸ್ತಿ ವಿವರ ಪರಿಶೀಲಿಸಿ ತಿದ್ದುಪಡಿಗಳಿದ್ದರೆ ಮಾಹಿತಿ ನೀಡಬೇಕು’ ಎಂದು ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.